ಜನ ಸಾಮಾನ್ಯರ ಕುಂದು-ಕೊರತೆಗೆ ಸ್ಪಂದಿಸಿ: ಸಿಇಓ
ಹಾಸನ

ಜನ ಸಾಮಾನ್ಯರ ಕುಂದು-ಕೊರತೆಗೆ ಸ್ಪಂದಿಸಿ: ಸಿಇಓ

May 26, 2019

ಚನ್ನರಾಯಪಟ್ಟಣ: ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು, ಜನಸಾಮಾನ್ಯರ ಕುಂದು ಕೊರತೆಗಳಿಗೆ ಸ್ಪಂದಿಸಿ ಕೆಲಸ ಮಾಡ ಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಕೆ.ಎನ್.ವಿಜಯ್‍ಪ್ರಕಾಶ್ ಸೂಚಿಸಿದರು.

ಚನ್ನರಾಯಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿ.ಡಿ.ಓಗಳೊಡನೆ ಸಭೆ ನಡೆಸಿದ ಅವರು, ಸಾರ್ವ ಜನಿಕರ ಅಹವಾಲುಗಳನ್ನು ಪರಿಹರಿಸದ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ ಸಿಬ್ಬಂದಿಗಳ ಧೋರಣೆಗಳನ್ನು ತಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಯೊಂದು ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಪರಸ್ಪರ ಪೂರಕ ಇಲಾಖೆಗಳು ತಮ್ಮ ಯೋಜನೆಗಳನ್ನು ಸಂಯೋಜನೆಗೊಳಿಸಿ ಅನುಷ್ಠಾನಗೊಳಿಸುವ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಉದ್ಯೋಗ ಖಾತರಿ ಯೋಜನೆಯು ಸಮರ್ಪಕ ಸದ್ಬಳಕೆಯಾಗಬೇಕು. ಹೆಚ್ಚಿನ ಉದ್ಯೋಗ ಹಾಗೂ ಸಮುದಾಯದ ಆಸ್ತಿಗಳನ್ನು ಸೃಷ್ಠಿಸಬೇಕು. ಕೃಷಿ, ತೋಟಗಾರಿಕೆ, ರೇಷ್ಮೇ, ಅರಣ್ಯ, ಸಾಮಾಜಿಕ ಅರಣ್ಯ, ಸಣ್ಣ ನೀರಾವರಿ, ಮೀನು ಗಾರಿಕೆ ಇಲಾಖೆ ಗಳು ಇದರಲ್ಲಿ ಸಂಪೂರ್ಣವಾಗಿ ತೊಡಗಿ ಕೊಳ್ಳಬೇಕು. ಜೊತೆಗೆ ಜಲಾಮೃತ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಜನ ಸಂರಕ್ಷಣೆ, ಜಲ ಸಾಕ್ಷರತೆ, ಜಲ ಮರುಪರ್ಣ ಕಾರ್ಯ ಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರಿಸರ ಹಾಗೂ ಅಂತರ್ಜಲ ವೃದ್ಧಿಗೆ ಶ್ರಮಿಸಬೇಕು. ಶಾಲಾ ಕಾಲೇಜು, ಪ್ರತಿ ಹಳ್ಳಿಗಳಲ್ಲಿ ಪರಿಸರ ಕಾಳಜಿ ಮೂಡಿಸಬೇಕು. ಸ್ವಚ್ಛ ಭಾರತ ಅಭಿಯಾನ ಸಮರ್ಪಕವಾಗಿ ಜಾರಿಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಮಾನು ಅಣೆಕಟ್ಟುಗಳ ನಿರ್ಮಾಣ ಹೆಚ್ಚಬೇಕು. ವೈಜ್ಞಾನಿಕವಾಗಿ ನೀರು ನಿರ್ವಹಣೆ ಮಾಡ ಬೇಕು. ಆ ಮೂಲಕ ಮುಂದೆ ಎದುರಾಗಬಹುದಾದ ಅಪಾಯಗಳಿಗೆ ಈಗಲೇ ಉಪಾಯ ಕಂಡುಕೊಳ್ಳಬೇಕು ಎಂದು ಹೇಳಿದರು.

ಯಾವುದೇ ಇಲಾಖೆಯು ಕೇವಲ ತನ್ನ ವಾರ್ಷಿಕ ಯೋಜನೆ ಗಳ ಅನುಷ್ಠಾನಕ್ಕೆ ಮಾತ್ರ ಸೀಮಿತ ಆದ್ಯತೆ ನೀಡದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುಟ್ಟ ಸ್ವಾಮಿ, ಯೋಜನ ನಿರ್ದೇಶಕ ಅರುಣ್‍ಕುಮಾರ್, ತೋಟ ಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಚಂದ್ರೇ ಗೌಡ ಮತ್ತಿತರರು ಹಾಜರಿದ್ದರು.

Translate »