ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ
ಹಾಸನ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ

August 6, 2018

ರಾಮನಾಥಪುರ:  ಸರ್ಕಾರದ ಸವಲತ್ತುಗಳನ್ನು ಸುಲಭವಾಗಿ ಜನರ ಬಳಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಡಾ.ಎ.ಟಿ.ರಾಮಸ್ವಾಮಿ ತಿಳಿಸಿದರು.

ರಾಮನಾಥಪುರ ಹೋಬಳಿ ಕೇರಳಾಪುರದ ಗ್ರಾಪಂ ಆವರಣದಲ್ಲಿ ನಡೆದ ಜನ ಸಂರ್ಪಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಜನರನ್ನು ಕಚೇರಿಗಳಿಗೆ ಅಲೆಸಬಾರದು ಎಂಬ ದೃಷ್ಟಿಯಿಂದ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ. ನೀರಾವರಿ, ಕಂದಾಯ, ವಿದ್ಯುತ್, ಶಿಕ್ಷಣ, ಕೃಷಿ ಸಂಬಂಧಿಸಿದ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಇವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿ, 2 ತಿಂಗಳಲ್ಲಿ ಪರಿಶೀಲಿಸಿ ಶ್ರೀಘವೇ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು. ಸಾರ್ವಜನಿಕರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಮಸ್ಯೆ, ಕಸ ವಿಲೇವಾರಿ, ರಸ್ತೆ, ಚರಂಡಿಗಳ ವ್ಯವಸ್ಥೆ ಸೇರಿದಂತೆ ಹಲವಾರು ಅರ್ಜಿಗಳನ್ನು ಶಾಸಕ ಎ.ಟಿ.ರಾಮಸ್ವಾಮಿಗೆ ಜನತೆ ಸಲ್ಲಿಸಿದರು.

ಈ ವೇಳೆ ಕೇರಳಾಪುರ ಗ್ರಾಪಂ ಅಧ್ಯಕ್ಷೆ ಯಶೋದ, ಉಪಾಧ್ಯಕ್ಷ ಮಹದೇವ್, ತಾಪಂ ಮಾಜಿ ಅಧ್ಯಕ್ಷ ಸಂತೋಷ್‍ಗೌಡ ತಹಶೀಲ್ದಾರ್ ಎಲ್.ನಂದಿಶ್, ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಲ್.ಯಶವಂತ್, ಡಾ.ಸ್ವಾಮೀಗೌಡ, ಮುಂತಾದವರಿದ್ದರು.

Translate »