ಶ್ರಾವಣ ಶನಿವಾರಗಳಂದು ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ಮೈಸೂರು

ಶ್ರಾವಣ ಶನಿವಾರಗಳಂದು ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

July 24, 2020

ಮೈಸೂರು, ಜು.23- ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅರಮನೆ ಮುಜರಾಯಿ ಸಂಸ್ಥೆಗಳಲ್ಲಿ ಒಂದಾದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯ ಶ್ರೀರಾಮ ದೇವಾಲಯ ಹಾಗೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಮತ್ತು ಖಾಸಗಿ ಆಡಳಿತ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಶ್ರಾವಣ ಮಾಸದ ಶನಿವಾರಗಳಂದು ಸಾರ್ವ ಜನಿಕರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಜು.25, ಆಗಸ್ಟ್ 1, ಆ.8 ಮತ್ತು ಆ.15ರಂದು ಭಕ್ತಾದಿಗಳಿಗೆ ಪ್ರವೇಶ, ದೇವಾಲಯದಿಂದ ಜರುಗುವ ಎಲ್ಲಾ ಸೇವೆಗಳು, ಜಾತ್ರೆ, ಉತ್ಸವಗಳನ್ನು ರದ್ಧುಗೊಳಿಸಿದ್ದು, ಎಂದಿನಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಒಳಭಾಗದಲ್ಲಿ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ನಡೆಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »