ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ ನಿರ್ಧಾರ

ಬೆಂಗಳೂರು: ಕರ್ನಾಟಕ ಸರ್ಕಾ ರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನ ಪ್ರಭಾ ಅವರು ಬಿಜೆಪಿ ಸೇರಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಮಲ್ಲಿಕಾರ್ಜುನಖರ್ಗೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಕೆ.ರತ್ನಪ್ರಭಾ ಅವರು ಬಿಜೆಪಿ ಸೇರುವ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.

ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿರುವ ಕಲಬುರಗಿ ಸಂಸದ ಮಲ್ಲಿಕಾರ್ಜುನಖರ್ಗೆ ಅವರನ್ನು ಸೋಲಿಸಲು ದಲಿತ ಸಮುದಾಯಕ್ಕೆ ಸೇರಿದ ರತ್ನಪ್ರಭಾ ಅವರನ್ನು ಕಣಕ್ಕಿಳಿ ಸಲಾಗುತ್ತದೆ ಎಂಬುದು ಸದ್ಯದ ಸುದ್ದಿ. ರತ್ನಪ್ರಭಾ ಅವರನ್ನು ಅಭ್ಯರ್ಥಿಯಾಗಿ ಮಾಡಿ ದರೆ ದಲಿತ ಸಮುದಾಯದ ಮತ ಗಳ ಜೊತೆಗೆ ಪ್ರಜ್ಞಾವಂತರ ಮತ ಗಳು ಸಹ ಬಿಜೆಪಿಗೆ ಬರುತ್ತವೆ. ಖರ್ಗೆ ಅವರು ಸೋತರೆ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ತರಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. ಕಲಬುರಗಿಗೆ ರತ್ನಪ್ರಭಾ ಈಗಾಗಲೇ ಒಮ್ಮೆ ಭೇಟಿ ನೀಡಿ ದ್ದಾರೆ. ಸೆಪ್ಟೆಂಬರ್‍ನಲ್ಲಿ ಪುನಃ ಭೇಟಿ ನೀಡಲಿದ್ದಾರೆ. ಈ ಭೇಟಿ ಅವರು ಕ್ಷೇತ್ರದಿಂದ 2019ರ ಲೋಕಸಭೆ ಚುನಾ ವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹುಟ್ಟುವಂತೆ ಮಾಡಿದೆ.