ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ಸುಗ್ರೀವಾಜ್ಞೆ ಹಿಂಪಡೆಯಿರಿ
ಮೈಸೂರು

ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ಸುಗ್ರೀವಾಜ್ಞೆ ಹಿಂಪಡೆಯಿರಿ

June 2, 2020

ಮೈಸೂರು, ಜೂ.1(ಪಿಎಂ)- ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ಸಂಬಂಧ ಹೊರಡಿಸಿರುವ ಸುಗ್ರೀ ವಾಜ್ಞೆ ಹಿಂಪಡೆಯಬೇಕು. ವಿದ್ಯುತ್ ವಿತ ರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಬೇಕು. ಆ ಮೂಲಕ ಆಳುವ ಸರ್ಕಾರಗಳು ರೈತರು ಹಾಗೂ ಕಾರ್ಮಿಕರ ಹಿತ ಕಾಯಬೇಕು ಎಂದು ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ಜೆ. ಜವರೇಗೌಡ, ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತ ಸಮುದಾಯಕ್ಕೆ ಮಾರಕವಾಗಲಿದ್ದು, ಕೂಡಲೇ ಸರ್ಕಾರ ಈ ಸಂಬಂಧ ಹೊರ ಡಿಸಿರುವ ಸುಗ್ರೀವಾಜ್ಞೆ ಹಿಂಪಡೆಯಬೇಕು. ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಯವರಿಗೆ ವಹಿಸುವ ಸಂಬಂಧದ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಬಾರದು ಎಂದು ಆಗ್ರಹಿಸಿದರು.

ಸೀವೆಜ್ ಉದ್ಯಾನ ಕೈಬಿಡಬೇಕು: ಸೀವೆಜ್ ಫಾರಂ ಪ್ರದೇಶವನ್ನು ಹಿಂದೆ ಮಹಾ ರಾಜರು ಜಾನುವಾರುಗಳ ಮೇವಿಗಾಗಿ ಮೀಸಲಿರಿಸಿದ್ದರು. ಇದೀಗ ಇಲ್ಲಿ ಉದ್ಯಾ ನವನ ನಿರ್ಮಿಸುವ ಉದ್ದೇಶಿತ ಯೋಜನೆ ಯನ್ನು ನಗರ ಪಾಲಿಕೆ ಕೈಬಿಡಬೇಕು. ಇಲ್ಲಿ ಜನವಸತಿ ಪ್ರದೇಶವಿಲ್ಲದೇ ಇರುವುದನ್ನು ಗಮನಿಸಿ ಜಿಲ್ಲಾಧಿಕಾರಿಗಳು ಉದ್ದೇಶಿತ ಯೋಜನೆ ತಡೆಹಿಡಿಯಬೇಕು ಎಂದು ಮನವಿ ಮಾಡಿದರು.

ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹ: ಸಚಿವ ಮಾಧುಸ್ವಾಮಿ ರೈತ ಮಹಿಳೆಯೊಬ್ಬ ರನ್ನು ನಿಂದಿಸಿರುವ ಹಿನ್ನೆಲೆಯಲ್ಲಿ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖ ಲಿಸಬೇಕು. ಇವರು ಕೂಡಲೇ ಶಾಸಕ ಹಾಗೂ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಮುಖ್ಯಮಂತ್ರಿ ಗಳೇ ಇವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಹಾಗೂ ಮುಖ್ಯಮಂತ್ರಿಗಳು ಘೋಷಿಸಿದ ಸಾವಿರಾರು ಕೋಟಿ ರೂ. ಪ್ಯಾಕೇಜ್ ಅರ್ಹ ಫಲಾನುಭವಿಗಳ ಕೈಗೆ ಈವರೆಗೂ ಸೇರಿಲ್ಲ. ಈ ಘೋಷಣೆ ಗಳನ್ನು ಕಾರ್ಯಗತಗೊಳಿಸಲು ಹಾಗೂ ರೈತರಿಗೆ ಪ್ರತ್ಯೇಕ ವಿಶೇಷ ಪ್ಯಾಕೇಜ್ ಘೋಷಿ ಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ವೇದಿಕೆ ಉಪಾಧ್ಯಕ್ಷ ಎಂ. ಮಧು, ಪ್ರಧಾನ ಕಾರ್ಯದರ್ಶಿ ಎಸ್.ದೇವ ರಾಜು, ಕನ್ನಡಪರ ಹೋರಾಟಗಾರ ಸತ್ಯಪ್ಪ ಮತ್ತಿತರರು ಗೋಷ್ಠಿಯಲ್ಲಿದ್ದರು.

Translate »