ಕಂದಾಯ ಸಚಿವರ ಜಿಲ್ಲಾ ಪ್ರವಾಸ
ಮೈಸೂರು

ಕಂದಾಯ ಸಚಿವರ ಜಿಲ್ಲಾ ಪ್ರವಾಸ

June 20, 2019

ಮೈಸೂರು: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಜೂನ್ 19 ಹಾಗೂ ಜೂ.20ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.19ರಂದು ರಾತ್ರಿ 8.30 ಗಂಟೆಗೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಜೂ.20ರಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕ್ರಮಗಳ ವೀಕ್ಷಣೆ ಮಾಡಲಿದ್ದಾರೆ. ಬೆಳಿಗ್ಗೆ 9:30ಕ್ಕೆ ಸಾರ್ವ ಜನಿಕ ಭೇಟಿ ಮಾಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಡಿಸಿ ಕಚೇರಿ ಯಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪ ಪರಿಹಾರ ಕ್ರಮ ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತಂತೆ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಭಾಗವಹಿಸಿ ನಂತರ ಮಧ್ಯಾಹ್ನ 1 ಗಂಟೆಗೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ.

Translate »