ಇಂದು ಮೈಸೂರಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ
ಮೈಸೂರು

ಇಂದು ಮೈಸೂರಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ

December 6, 2018

ಮೈಸೂರು: ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ನಾಳೆ (ಡಿ. 6) ಮಧ್ಯಾಹ್ನ 3.30 ಗಂಟೆಗೆ ಮೈಸೂರಿಗೆ ಆಗಮಿಸುವರು. ಮೈಸೂರಿನ ನಜರ್ ಬಾದ್‍ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿರುವ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸು ವರು. ಸಂಜೆ 4 ಗಂಟೆಗೆ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯಲ್ಲಿ ಸೀಮೆನ್ಸ್ ಶ್ರೇಷ್ಠತಾ ಕೇಂದ್ರದ ಕೌಶಲ್ಯ ತರಬೇತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೇಶಪಾಂಡೆ ಅವರು ಸಂಜೆ 6 ಗಂಟೆಗೆ ಬೆಂಗಳೂರಿಗೆ ಹಿಂತಿರುಗುವರು.

Translate »