ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್‍ವೈ ಕೆಳಗಿಳಿಸಿದರೆ ರಾಜ್ಯದಲ್ಲಿ ಕ್ರಾಂತಿ
ಮೈಸೂರು

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್‍ವೈ ಕೆಳಗಿಳಿಸಿದರೆ ರಾಜ್ಯದಲ್ಲಿ ಕ್ರಾಂತಿ

November 23, 2020

ಬೀದರ್: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸಬೇಕು ಎನ್ನುವ ವಿಚಾರ ಕೇಳಿ ಬರುತ್ತಿದೆ. ಅಕಸ್ಮಾತ್ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯ ಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಕ್ರಾಂತಿಯೇ ಆಗಲಿದೆ ಎಂದು ಬೀದರ್ ಜಿಲ್ಲೆಯ ಹುಲಸೂರಿನ ಗುರುಬಸವೇಶ್ವರ ಸಂಸ್ಥಾನ ಮಠದ ಡಾ. ಶಿವಾನಂದ ಶ್ರೀ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬೀದರ್‍ನಲ್ಲಿ ಭಾನುವಾರ ಕನ್ನಡ ಭವನದ ಭೂಮಿ ಪೂಜೆ ಕಾರ್ಯ ಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ವಿಚಾರದಲ್ಲಿ ಎಲ್ಲರೂ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಇದು ನನ್ನ ವೈಯಕ್ತಿಕ ವಿಚಾರ ಎಂದು ಶಿವಾನಂದ ಶ್ರೀ ನುಡಿದರು.

ಯಡಿಯೂರಪ್ಪ ಅವರನ್ನು ಬದ ಲಿಸಬೇಕು ಎನ್ನುವುದು ಸಾಮಾನ್ಯ ವಾದ ಮಾತಲ್ಲ. ಬಿಎಸ್‍ವೈ ಮಾಡಿ ರುವ ಕೆಲಸಗಳನ್ನು ಯಾರೂ ಮಾಡಿಲ್ಲ. ರಾಜ್ಯದಲ್ಲಿ ಬಹಳಷ್ಟು ದೊಡ್ಡ ದೊಡ್ಡ ಕೆಲಸಗಳನ್ನು ಅವರು ಮಾಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು ಮೆಚ್ಚು ವಂತವು ಎಂದು ಶ್ರೀಗಳು ತಿಳಿಸಿದರು.

Translate »