ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

July 9, 2018

ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಕರ್ನಾಟಕ ಇತಿಹಾಸ್ ಸಾಂಸ್ಕೃತಿಕ ಕಲಾ ಸಂಸ್ಥೆ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸಮಾರಂಭವನ್ನು ಉದ್ಘಾಟಿಸಿ ಮಾತ ನಾಡಿದ ಬಿಜೆಪಿ ಮುಖಂಡ ಎನ್.ವಿ. ಫಣೀಶ್, ವಿದ್ಯಾರ್ಥಿಗಳು ಎತ್ತರಕ್ಕೆ ಬೆಳೆಯಬೇಕಾದರೆ ತಮ್ಮ ತಪ್ಪುಗಳನ್ನು ಅರಿತುಕೊಳ್ಳಬೇಕು. ಸಮಾಜದ ಹಿತಕ್ಕಾಗಿ ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿ ಗಳಲ್ಲಿ ಒಳ್ಳೆಯ ದೃಷ್ಟಿಕೋನಗಳನ್ನು ಬೆಳೆಸ ಬೇಕು. ಮುಂದಿನ ಪೀಳಿಗೆ ಸಮಾಜಕ್ಕೆ ಆಸ್ತಿಯಾಗಬೇಕೇ ವಿನಃ ಹೊರೆಯಾಗಬಾರದು. ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭೆಯನ್ನು ಇಮ್ಮಡಿಗೊಳಿಸಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯುತ್ತಿರ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಡಿ.ರಾಜಣ್ಣ ಮಾತನಾಡಿ, ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿರುವ ಸೂಲಗಿತ್ತಿ ನರಸಮ್ಮ ಅವರನ್ನು ಅಭಿನಂದಿಸುತ್ತೇನೆ. ಯಾವುದೇ ಪ್ರತಿಫಲ ಗಳನ್ನು ಇಟ್ಟುಕೊಳ್ಳದೆ ಸಮಾಜ ಸೇವೆ ಯನ್ನು ಮಾಡಿದಲ್ಲಿ, ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆ. ಅಂತಹ ವರಿಗೆ ನಿದರ್ಶನವಾಗಿ ಡಾ.ಸೂಲಗಿತ್ತಿ ನರಸಮ್ಮ ನಿಲ್ಲುತ್ತಾರೆ.

ಸಾಧಕರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರಿಂದ ಮುಂದಿನ ದಿನಗಳಲ್ಲಿ ಸಾಧಕರ ಸಾಲಿನಲ್ಲಿ ನಿಲ್ಲಲು ಸಜ್ಜಾಗುತ್ತಾರೆ. ಹಾಗೆಯೇ ಸಮಾಜಕ್ಕೆ ತಮ್ಮದೆಯಾದ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಾರೆ ಎಂದರು.

ನಂತರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸೂಲಗಿತ್ತಿ ನರಸಮ್ಮ, ಸಹಕಾರ ಇಲಾಖೆ ನಿವೃತ್ತ ಉಪ ನಿರ್ದೇಶಕ ಸಿ.ಮಹದೇವಯ್ಯ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೈಸೂರು ಶಾಖೆ ನಿವೃತ್ತ ವ್ಯವಸ್ಥಾಪಕ ಆರ್. ರಂಗನಾಥ್, ಸಮರ್ಪಣಾ ಟ್ರಸ್ಟ್ ಕಾರ್ಯದರ್ಶಿ ಸುಧಾ ಫಣೀಶ್, ಸ್ವರಾಲಯ ಸಂಗೀತ ಸಂಸ್ಥೆ ಅಧ್ಯಕ್ಷೆ ಸುಮಾ ಹರಿನಾಥ್ ಅವರನ್ನು ಸನ್ಮಾನಿಸಲಾಯಿತು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.

ಇಲಾಖೆ ನಿವೃತ್ತ ಉಪ ನಿರ್ದೇಶಕ ಎಸ್.ಈ. ಮಹದೇವಪ್ಪ, ಕೆಪಿಸಿಸಿ ಎಸ್‍ಸಿ ಘಟಕ ರಾಜ್ಯ ಸಂಚಾಲಕ ಕಾಳಯ್ಯ, ಕರ್ನಾಟಕ ಇತಿಹಾಸ್ ಸಾಂಸ್ಕೃತಿಕ ಕಲಾ ಸಂಸ್ಥೆ ಅಧ್ಯಕ್ಷ ಜೆ.ಎಸ್.ಇತಿಹಾಸ್ ಸೇರಿದಂತೆ ಇನ್ನಿತ ರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Translate »