ಚಳಿಗಾಲದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: ಡಾ.ಹರ್ಷವರ್ಧನ್ ಎಚ್ಚರಿಕೆ
ಮೈಸೂರು

ಚಳಿಗಾಲದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: ಡಾ.ಹರ್ಷವರ್ಧನ್ ಎಚ್ಚರಿಕೆ

October 12, 2020

ನವದೆಹಲಿ,ಅ.11-ದೇಶದಲ್ಲಿ ಕೋವಿಡ್ ಪ್ರಕರಣಗಳು ಗಣ ನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್, ಚಳಿಗಾಲದ ಅವಧಿ ಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ. ವಾರದ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮ ‘ಸಂವಾದ’ದಲ್ಲಿ ಪಾಲ್ಗೊಂಡ ಅವರು, ಕೊರೊನಾ ವೈರಸ್ ಶ್ವಾಸಕೋಶದ ವೈರಸ್ ಆಗಿದ್ದು, ತಂಪು ವಾತಾವರಣದಲ್ಲಿ ಉಸಿರಾಟದ ವೈರಸ್ ಹರಡುವುದು ಹೆಚ್ಚಾಗು ತ್ತದೆ. ತಂಪು ಹವಾಮಾನ ಮತ್ತು ಕಡಿಮೆ ಆರ್ದ್ರತೆಯ ಸ್ಥಿತಿಯಲ್ಲಿ ಶ್ವಾಸಕೋಶದ ವೈರಸ್‍ಗಳು ಹೆಚ್ಚಾಗುತ್ತದೆ. ನೆನಪಿನಲ್ಲಿಟ್ಟುಕೊಳ್ಳ ಬೇಕಾದ ಇನ್ನೊಂದು ಸಂಗತಿಯೆಂದರೆ, ಚಳಿಗಾಲದ ಸಮಯ ದಲ್ಲಿ, ವಸತಿ ನಿವಾಸಗಳಲ್ಲಿ ಜನದಟ್ಟಣೆ ಹೆಚ್ಚಾಗುವ ಪ್ರವೃತ್ತಿ ಇದೆ. ಇದು ಸೋಂಕಿನ ಪ್ರಸರಣವನ್ನು ಹೆಚ್ಚಿಸಬಹುದು. ಆದ್ದ ರಿಂದ ಚಳಿಗಾಲದ ಋತುವಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ ತಳ್ಳಿ ಹಾಕ ಲಾಗದು. ಅಲ್ಲದೆ, ಸಾಲು ಸಾಲು ಹಬ್ಬಗಳು ಬರುತ್ತಿವೆ. ಜನರು ಹೆಚ್ಚಾಗಿ ಒಂದೇ ಕಡೆ ಸೇರುವ ಸಾಧ್ಯತೆಗಳು ಹೆಚ್ಚಾಗಿದೆ. ಈ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸದೆ ಹೋದರೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತದೆ ಎಂದರು.

 

 

 

Translate »