ರಸ್ತೆ ದಾಟುತ್ತಿದ್ದ ವ್ಯಕ್ತಿ ಬಸ್ ಹರಿದು ಸಾವು
ಮೈಸೂರು

ರಸ್ತೆ ದಾಟುತ್ತಿದ್ದ ವ್ಯಕ್ತಿ ಬಸ್ ಹರಿದು ಸಾವು

May 27, 2018

ಮೈಸೂರು: ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ರಸ್ತೆ, ಕಡಕೊಳದಲ್ಲಿ ನಡೆದಿದೆ. ಕಡಕೊಳದ ಪಂಜಾಬಿ ಡಾಬದ ಬಳಿ ಮೇ 24ರಂದು ರಾತ್ರಿ ಸುಮಾರು 9.30ರ ವೇಳೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ, ನಂಜನಗೂಡಿನಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್(ಕೆಎ-10, ಎಫ್-0110) ಡಿಕ್ಕಿ ಹೊಡೆದಿದೆ. ಪರಿಣಾಮ ಅಪರಿಚಿತ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟು ಬಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ವ್ಯಕ್ತಿಗೆ ಸುಮಾರು 55 ವರ್ಷ ವಯಸ್ಸಾಗಿದ್ದು, ಕಪ್ಪು ಬಣ್ಣದ ಶರ್ಟ್ ಧರಿಸಿದ್ದರು. ಈ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮೈಸೂರು ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆ ಶವಾಗಾರದಲ್ಲಿ ಇಡಲಾಗಿದ್ದು, ವಾರಸುದಾರರಿದ್ದಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್(0821-2444800), ದಕ್ಷಿಣ ಪೊಲೀಸ್ ಠಾಣೆ(2444955) ಸಂಪರ್ಕಿಸುವಂತೆ ಪೊಲೀಸರು ಮನವಿ ತಿಳಿಸಿದ್ದಾರೆ.

Translate »