ಅಂತಿಮ ತೀರ್ಮಾನ ರಾಜ್ಯಗಳದ್ದು
ನವದೆಹಲಿ,ಅ.5-ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್‍ಡೌನ್ ಅನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಅನ್‍ಲಾಕ್ 5ರಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿ ರಾಜ್ಯಸರ್ಕಾರ ಗಳಿಗೆ ನಿರ್ಧಾರ ಕೈಗೊಳ್ಳಲು ತಿಳಿಸ ಲಾಗಿದೆ. ಅಕ್ಟೋಬರ್ 15ರ ನಂತರ ಶಾಲಾ ಕಾಲೇಜು ಆರಂಭಕ್ಕೆ ಅನು ಮತಿ ನೀಡಿ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿರುವ ಕೇಂದ್ರ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಸ್ಥಿತಿಗೆ ಅನುಗುಣ ವಾಗಿ ಶಾಲಾ ಕಾಲೇಜು ಆರಂಭಕ್ಕೆ ನಿರ್ಧಾರ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಶಾಲೆಗೆ ಬರಲು ಸ್ವಯಂ ನಿರ್ಧಾರ ಕೈಗೊಳ್ಳಬೇಕು. ಜೊತೆಗೆ ಪೆÇೀಷಕರ ಲಿಖಿತ ಒಪ್ಪಿಗೆ ಪಡೆಯಬೇಕು. ಕಂಟೇನ್ಮೆಂಟ್ ವಲಯದಲ್ಲಿ ಇರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಗೆ ಬರುವಂತಿಲ್ಲ. ಅಂತಹ ವಿದ್ಯಾರ್ಥಿಗಳು ಆನ್ಲೈನ್ ಕಲಿಕೆ ಮುಂದುವರೆಸಬಹುದು. ಆನ್ಲೈನ್ ಕಲಿಕೆಯನ್ನು ಕೂಡ ಹಾಜರಾತಿಗೆ ಪರಿಗಣಿಸ ಲಾಗುವುದು ಎಂದು ಹೇಳಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಕಾರ್ಯಪಡೆ ರಚಿಸಿ ತುರ್ತು ಆರೈಕೆ ತಂಡ, ಸ್ವಚ್ಛತಾ ತಂಡಗಳನ್ನು ಸಜ್ಜಾಗಿರಬೇಕು. ಸಾಮಾಜಿಕ ಅಂತರ ಸೇರಿದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಲೆಗಳಲ್ಲಿ ಬಿಸಿಯೂಟ ತಯಾರಿಸಿ ಮಕ್ಕಳಿಗೆ ನೀಡುವ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ನೀಡಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೆÇೀಖ್ರಿಯಾಲ್ ನಿಶಾಂಕ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.