ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿ
ಹಾಸನ

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿ

June 26, 2018

ಬೆಂಗಳೂರು: ವರ್ಗಾವಣೆಗೆ ಸಂಬಂಧಿಸಿದಂತೆ ಸರ್ಕಾ ರದ ವಿರುದ್ಧ ಕಾನೂನು ಹೋರಾಟ ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಯ ಸಾಧಿಸಿದ್ದಾರೆ.

ಸಿಂಧೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ಸರ್ಕಾರ ಇಂದಿಲ್ಲಿ ನೇಮಕ ಮಾಡಿ, ಆದೇಶ ಹೊರಡಿಸಿದೆ. ವಿಧಾನಸಭಾ ಚುನಾವಣಾ ಸಂದರ್ಭ ದಲ್ಲಿ ಹಾಸನ ಜಿಲ್ಲಾಧಿಕಾರಿ ಸ್ಥಾನ ದಿಂದ ವರ್ಗಾವಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ, ಕಳೆದ ಮೂರು ತಿಂಗಳಿನಿಂದ ಕಾನೂನು ಹೋರಾಟ ನಡೆಸಿದ್ದರು.

ರಾಜಕೀಯ ಒತ್ತಡಕ್ಕೆ ಮಣಿದು, ಸರ್ಕಾರ ತಮ್ಮನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವರ್ಗೀ ನೀತಿ ಪ್ರಕಾರ ಎರಡು ವರ್ಷಗಳ ಅವಧಿ ಪೂರ್ಣಗೊಳ್ಳುವವರೆಗೂ ನನ್ನನ್ನು ಬದಲಾಯಿಸುವಂತಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ರಾಜಕೀಯ ಪ್ರಭಾವದಿಂದ ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ನನ್ನನ್ನು ಅವಧಿಗೂ ಮುನ್ನವೇ ವರ್ಗಾವಣೆ ಮಾಡಲಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ರೋಹಿಣಿ ಅವರ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‍ಗೆ ಸರ್ಕಾರ ಇಂದು ತನ್ನ ನಿಲುವನ್ನು ತಿಳಿಸಬೇಕಿತ್ತು. ಇದಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಿ, ಆದೇಶ ಹೊರಡಿಸಿದೆ.

Translate »