ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್
ಮೈಸೂರು

ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್

October 14, 2018

ಮೈಸೂರು: ಎಲ್‍ಪಿಜಿ ಟ್ಯಾಂಕರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಘಟನೆ ಶುಕ್ರವಾರ ರಾತ್ರಿ ಮೈಸೂರಿನ ದಟ್ಟಗಳ್ಳಿ ಬಳಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಗ್ಯಾಸ್ ಸೋರಿಕೆ ಆಗದ ಕಾರಣ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದನ್ನು ಹೊರತುಪಡಿಸಿದರೆ ಯಾವುದೇ ಪ್ರಾಣಾಪಾಯವಾಗಲಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕುವೆಂಪುನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸರಸ್ವತಿ ಪುರಂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಇಂದು ಬೆಳಿಗ್ಗೆ ಕ್ರೇನ್ ತರಿಸಿ ಉರುಳಿಬಿದ್ದಿದ್ದ ಟ್ಯಾಂಕರ್ ಅನ್ನು ಸುರಕ್ಷಿತವಾಗಿ ಮೇಲೆತ್ತಿ ತೆರವುಗೊಳಿಸಿದರು.

ಟ್ಯಾಂಕರ್ ಉರುಳಿ ಬಿದ್ದಿದ್ದರಿಂದ ದಟ್ಟ ಗಳ್ಳಿಯ ಸಾ.ರಾ.ಕನ್ವೆನ್ಷನ್ ಹಾಲ್ ಎದು ರಿನ ರಿಂಗ್ ರಸ್ತೆಯಲ್ಲಿ ವಾಹನ ಸಂಚಾ ರಕ್ಕೆ ಅಡ್ಡಿಯಾಯಿತು. ಮೈಸೂರು ಕಡೆ ಯಿಂದ ಹೆಚ್.ಡಿ.ಕೋಟೆ ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಸಾ.ರಾ.ಕನ್ವೆನ್ಷನ್ ಹಾಲ್ ಎದುರು ಶುಕ್ರ ವಾರ ರಾತ್ರಿ 10.30 ಗಂಟೆ ವೇಳೆಗೆ ಚಾಲ ಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ಅತೀ ವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Translate »