10 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರು

10 ಲಕ್ಷ ರೂ. ಪರಿಹಾರ ಘೋಷಣೆ

December 23, 2019

ಬೆಂಗಳೂರು,ಡಿ.22-ಮಂಗಳೂರು ಗೋಲಿಬಾರ್ ಘಟನೆಯಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಶಾಂತವಾಗಿದ್ದು, ಅಲ್ಲಿಗೆ ಭೇಟಿ ನೀಡಲು ನಾವು ಯಾರಿಗೂ ತಡೆ ಒಡ್ಡಿಲ್ಲ. ಈಗ ಅಲ್ಲಿ ಕರ್ಫ್ಯೂ ಸಡಿಸಲಿಸಲಾಗಿದೆ. ಮಂಗ ಳೂರು ಘಟನೆಯ ಬಗ್ಗೆ ತನಿಖೆಯನ್ನೂ ನಡೆಸುತ್ತೇವೆ. ಸಿದ್ದರಾಮಯ್ಯ ಯಾವಾಗ ಬೇಕಾದರೂ ಮಂಗಳೂರಿಗೆ ಭೇಟಿ ನೀಡಬಹುದು ಎಂದು ಯಡಿಯೂರಪ್ಪ ತಿಳಿಸಿದರು. ಕಂದಕ್ ನಿವಾಸಿ ಅಬ್ದುಲ್ ಜಲೀಲ್ ಹಾಗೂ ನೌಶೀನ್ ಅವರು ಗೋಲಿಬಾರ್‍ನಲ್ಲಿ ಮೃತಪಟ್ಟಿದ್ದರು. ನಿನ್ನೆ ಯಡಿಯೂರಪ್ಪ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋ ಧಿಸಿ ಮಂಗಳೂರಿನಲ್ಲಿ ಗೋಲಿಬಾರ್ ವೇಳೆ ಇಬ್ಬರು ಮೃತಪಟ್ಟಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡದ(ಎಸ್‍ಐಟಿ) ಮೂಲಕ ತನಿಖೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. ಗೋಲಿಬಾರ್ ಕುರಿತು ಸತ್ಯಾಸತ್ಯತೆ ಹೊರಬರ ಬೇಕಾಗಿದೆ. ಹೀಗಾಗಿ ಎಸ್‍ಐಟಿಗೆ ತನಿಖೆ ವಹಿಸುವ ಚಿಂತನೆ ನಡೆದಿದೆ ಎಂದರು.

Translate »