15 ತಿಂಗಳಲ್ಲಿ 10 ಲಕ್ಷ `ಸ್ವಂತ ಸೂರು’ ನಿರ್ಮಾಣ: ಸಚಿವ ಸೋಮಣ್ಣ
ಮೈಸೂರು

15 ತಿಂಗಳಲ್ಲಿ 10 ಲಕ್ಷ `ಸ್ವಂತ ಸೂರು’ ನಿರ್ಮಾಣ: ಸಚಿವ ಸೋಮಣ್ಣ

August 26, 2021

ಮೈಸೂರು, ಆ.25(ವೈಡಿಎಸ್)- ಪ್ರತಿ ಯೊಬ್ಬರಿಗೂ ಸ್ವಂತ ಸೂರು ಒದಗಿಸ ಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ರಾಜ್ಯದಲ್ಲಿ 2 ವರ್ಷಗಳಿಂದ 3 ಲಕ್ಷಕ್ಕೂ ಹೆಚ್ಚಿನ ಮನೆ ಗಳನ್ನು ನಿರ್ಮಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇನ್ನು 15-16 ತಿಂಗಳಲ್ಲಿ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮನೆ ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದರು. ನಾನು ವಸತಿ ಸಚಿವನಾದ ನಂತರ 2 ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ 2.36 ಲಕ್ಷ ಮನೆ ಗಳನ್ನು ನಿರ್ಮಿಸಲಾಗಿದೆ. ಇನ್ನು ನಗರ ಪ್ರದೇಶದಲ್ಲಿ 85 ಸಾವಿರಕ್ಕೂ ಹೆಚ್ಚು ಮನೆ ಗಳನ್ನು ನಿರ್ಮಿಸಿದ್ದು, ಈಗಾಗಲೇ 45 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 1 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಿದ್ದು, 10 ಸಾವಿರ ಮನೆಗಳ ನಿರ್ಮಾಣ ಸದ್ಯದಲ್ಲೇ ಪೂರ್ಣ ಗೊಳ್ಳಲಿದೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯೂ ಪ್ರಾರಂಭವಾಗಿದೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದಾಗ ಗ್ರಾಮೀಣ ಭಾಗದಲ್ಲಿ 5 ಲಕ್ಷ ಮನೆ ನಿರ್ಮಾಣಕ್ಕೆ ಚಾಲನೆ ನೀಡಿ ದ್ದರು. ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಯಾದ ಬಳಿಕ 4 ಲಕ್ಷ ಮನೆ ನಿರ್ಮಾ ಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ ಎಂದ ಅವರು, ಪ್ರವಾಹ ಸಂತ್ರಸ್ತರಿಗೆ ಈಗಾ ಗಲೇ 1,750 ಕೋಟಿ ರೂ. ಹೆಚ್ಚು ಹಣ ಬಿಡುಗಡೆ ಮಾಡಿದ್ದು, ಉಳಿಕೆ 150 ಕೋಟಿ ರೂ.ಗಳನ್ನು ಸದ್ಯದಲ್ಲೇ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ಹಿರಿಯ ಕಾರ್ಯಕರ್ತೆ: ನಗರ ಪಾಲಿಕೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮೇಯರ್ ಸ್ಥಾನ ಬಿಜೆಪಿಗೆ ಸಿಕ್ಕಿದೆ ಎನ್ನುವುದಕ್ಕಿಂ ತಲೂ ನಮ್ಮ ಪಕ್ಷದ ಹಿರಿಯ ಕಾರ್ಯ ಕರ್ತೆ ಮೇಯರ್ ಆಗಿರುವುದಕ್ಕೆ ಸಂತೋಷ ತಂದಿದೆ. ಇದು ಜಿಲ್ಲೆಯ ಮುಂದಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ದಿಕ್ಸೂಚಿ ಯಾಗಲಿದೆ. ಕಾರ್ಯಕರ್ತರು ಹುಮ್ಮಸ್ಸಿ ನಿಂದ ಕೆಲಸ ಮಾಡುತ್ತಾರೆ ಎಂದರು. ಸಂಸದ ಪ್ರತಾಪಸಿಂಹ ಮತ್ತಿತರರಿದ್ದರು.

Translate »