ಬೆಂಗಳೂರು, ಸೆ.30-ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕ್ರಮವನ್ನು ಕೈಗೊಂ ಡಿರುವ ರಾಜ್ಯ ಸರ್ಕಾರ, ಮಾಸ್ಕ್ ಧರಿಸುವ ಕಡ್ಡಾಯ ನಿಯಮ ವನ್ನು ಮತ್ತಷ್ಟು ಬಿಗಿ ಗೊಳಿಸಿದೆ. ಮಾಸ್ಕ್ ಅನ್ನು ಧರಿಸದೇ ನಗರ ಪ್ರದೇಶದಲ್ಲಿ ಓಡಾಡಿದರೆ ಅಂತಹವರಿಗೆ ರೂ. 1000 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದವರಿಗೆ ರೂ.500 ದಂಡವನ್ನು ವಿಧಿಸುವ ನಿಯಮವನ್ನು ಜಾರಿಗೆ ತರ ಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂಗಡಿ -ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ವಾಗಿದೆ. ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಹೀಗೆ ಅಂತರ ಕಾಯ್ದುಕೊಳ್ಳದವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳ ಲಾಗುತ್ತದೆ ಎಂಬುದಾಗಿ ತಿಳಿಸಿದರು.
ಮದುವೆಗೆ 50 ಜನರ ಮಿತಿ: ಇದು ವರೆಗೆ ಕೊರೊನಾ ಸೋಂಕಿನ ಭೀತಿಯ ನಡುವೆಯೂ ಮದುವೆಗೆ ಅವಕಾಶ ನೀಡಲಾಗಿತ್ತು. 50 ಜನರಿಗೆ ಮಾತ್ರವೇ ಸೀಮಿತಗೊಳಿಸಲಾಗಿತ್ತು.
ಆದರೆ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಕಾರಣ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ. ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ, ಮದುವೆ ನಡೆಸುತ್ತಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಸರ್ಕಾರಿ ನೌಕರರಿಗೂ ಮಾಸ್ಕ್ ಕಡ್ಡಾಯ: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯ ವಾಗಿ ನೌಕರರು ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೇ ಕಚೇರಿಗೆ ಯಾವುದೇ ನೌಕರ ರಿಗೂ ಪ್ರವೇಶವಿಲ್ಲ. ಈ ನಿಮಯ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಕ್ಕಾಗಿ ಮಾಸ್ಕ್ ಧರಿಸುವುದರ ಬಗ್ಗೆ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ನೌಕರರ ಹಿತ ದೃಷ್ಠಿಯಿಂದ ಸರ್ಕಾರಿ ಕಚೇರಿಗಳಲ್ಲಿಯೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ ಎಂದರು.