ರಾಜ್ಯ ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 102 ಕೋಟಿ ರೂ.
ಕೊಡಗು

ರಾಜ್ಯ ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 102 ಕೋಟಿ ರೂ.

August 27, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾ ಗಿದ್ದು, ಸಾವಿರಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಒಂದು ದಿನದ ವೇತನ 102 ಕೋಟಿ ರೂ.ವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ರಾಮು ತಿಳಿಸಿದ್ದಾರೆ.

ನಗರದ ಹೋಟೆಲ್‍ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರಿದ್ದು, ಖಜಾನೆ ಮೂಲಕ ಒಂದು ದಿನದ ವೇತನ ಒಟ್ಟು 102 ಕೋಟಿ ರೂ. ಕಟಾವಣೆಯಾಗಲಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಷ್ಟ್ರ ಹಾಗೂ ರಾಜ್ಯಗಳಲ್ಲಿ ಸಂಭ ವಿಸುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವಿನ ಹಸ್ತ ನೀಡುತ್ತಾ ಬಂದಿದೆ. ಈ ಹಿಂದೆ ಕಾರ್ಗಿಲ್ ಯುದ್ಧ ಪರಿಹಾರ ನಿಧಿ, ಗುಜರಾತ್ ಭೂಕಂಪ ಸೇರಿದಂತೆ ಹಲವು ಸಂದರ್ಭಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತ ನವನ್ನು ದೇಣಿಗೆಯಾಗಿ ನೀಡಿದೆ ಎಂದು ಹೇಳಿದರು. ಪ್ರಸ್ತುತ ರಾಜ್ಯದ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ದಿಂದಾಗಿ ಲಕ್ಷಾಂತರ ಜನರು ನಿರಾಶ್ರಿತ ರಾಗಿದ್ದು, ಸಂಕಷ್ಟಕ್ಕೆ ಸಿಲುಕಿ ಅಪಾರ ಪ್ರಮಾ ಣದ ಸಾವುನೋವು, ಆಸ್ತಿ ಪಾಸ್ತಿಗಳಿಗೆ ನಷ್ಟ ಸಂಭವಿಸಿರುವುದು ನೋವಿನ ಸಂಗತಿ. ಈ ಸನ್ನಿವೇಶದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ನೀಡುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ ಎಂದರು.

ಈ ಹಿನ್ನಲೆಯಲ್ಲಿ ಆಗಸ್ಟ್ 20 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕ ರರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳ ತುರ್ತು ಕಾರ್ಯಕಾರಿ ಸಮಿತಿ ಸಭೆಯ ತೀರ್ಮಾನ ದಂತೆ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸು ತ್ತಿರುವ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನ ಸಮಾರು 102 ಕೋಟಿ ರೂ.ಗಳನ್ನು ಜಿಲ್ಲೆಯ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಹೇಳಿದರು.

ಜೋಡುಪಾಲ ಗ್ರಾಮದ ನಿವಾಸಿ ಹಾಗೂ ಸುಳ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರಾಗಿ ಸೇವೆ ಸಲ್ಲಿಸು ತ್ತಿದ್ದ ಬಸಪ್ಪ ಅವರು ಅತಿವೃಷ್ಟಿಗೆ ಸಿಲುಕಿ ಮೃತರಾಗಿದ್ದು, ಅವರಿಗೆ ಇದೇ ಸಂದರ್ಭ ದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
2006 ರಿಂದ ಜಾರಿಗೆ ಬಂದಿರವ ಎನ್‍ಪಿಎಸ್ ರದ್ದುಪಡಿಸಿ ಹಳೇ ಪದ್ಧತಿಯ ವನ್ನೇ ಮುಂದುವರೆಸಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಯವರಲ್ಲಿ ಕೋರಲಾಗಿದೆ. ಈ ಮನವಿಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಮು ತಿಳಿಸಿದರು. ರಾಜ್ಯ ಸರ್ಕಾರಿ ನೌಕಕರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ನಿರ್ದೇಶಕರಾದ ರಾಜ ಕುಮಾರ್, ಜಗದೀಶ, ಉಮೇಶ, ಗೋವಿಂದರಾಜು, ಶಿವರಾಮು, ಲಕ್ಷ್ಮಿ ಕಾಂತ್, ಸರ್ಕಾರಿ ನೌಕರರ ಜಿಲ್ಲಾ ಘಟ ಕದ ಅಧ್ಯಕ್ಷ ರವಿ ಇತರರು ಇದ್ದರು.

Translate »