2.20 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ
ಚಾಮರಾಜನಗರ

2.20 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

July 9, 2018

ಚಾಮರಾಜನಗರ:  ತಾಲೂಕಿನ ಬಿಸಲವಾಡಿ, ಕೊತ್ತಲವಾಡಿ ಹಾಗೂ ಕಿಲಗೆರೆ ಗ್ರಾಮಗಳಲ್ಲಿ ವಿವಿಧ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ 2.20 ಕೋಟಿ ವೆಚ್ಚದ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿ ಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಸಚಿವರಾಗಿ ಮೊದಲ ಬಾರಿಗೆ ಬಿಸಲ ವಾಡಿ ಗ್ರಾಮಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ನೀಡಿ ಸನ್ಮಾನಿಸಿದರು. ಗ್ರಾಮದ ಲಕ್ಷ್ಮಿ ದೇವಸ್ಥಾನಕ್ಕೂ ತೆರಳಿ ಸಚಿವರು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಬಿಸಲವಾಡಿ ಗ್ರಾಮದ ಮುಖ್ಯ ರಸ್ತೆಯಿಂದ ತಮಿಳುನಾಡು ಗಡಿ ರಸ್ತೆಯ ವರೆಗೆ ಕೈಗೊಳ್ಳಲಾಗುತ್ತಿರುವ 1 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಕುಂದುಕೊರತೆ ಆಲಿಸಿದರು.

ಒಆರ್‍ಎಫ್ ಯೋಜನೆಯಡಿ ಕೊತ್ತಲ ವಾಡಿ ಗ್ರಾಮದ ಮುಖ್ಯ ರಸ್ತೆಯಿಂದ ತೆರಕಣಾಂಬಿ ರಸ್ತೆವರೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಕಿಲಗೆರೆ ಗ್ರಾಮದ ನಾಯಕ ಬಡಾ ವಣೆಯಲ್ಲಿ ಟಿಎಸ್‍ಪಿ ಯೋಜನೆಯಡಿ ಸಿ.ಸಿ.ರಸ್ತೆ, ಚರಂಡಿ ಅಭಿವೃದ್ಧಿ ಕಾಮ ಗಾರಿಗಳಿಗೆ ಚಾಲನೆ ನೀಡಿ ನಾಗರಿಕರಿಂದ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮಕ್ಕಾಗಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿ ವರು, ಕ್ಷೇತ್ರದ ಜನರ ಆಶೀರ್ವಾದದಿಂದ ಇಂದು ಸಚಿವನಾಗಿದ್ದು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು. ಹಿಂದಿನ 3 ಅವಧಿಯ ಶಾಸಕತ್ವದ ಅವಧಿಯಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಲಿದ್ದು, ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡ ಲಾಗದೆ. ಸಂಪರ್ಕ ರಸ್ತೆಗಳು ನಾಗರಿಕರ ಸಂಚಾರಕ್ಕೆ ಅಗತ್ಯವಾಗಿದ್ದು ಉತ್ತಮ ಗುಣಮಟ್ಟದಿಂದ ರಸ್ತೆ, ಚರಂಡಿ ಕಾಮ ಗಾರಿಗಳನ್ನು ಅಧಿಕಾರಿಗಳು, ಇಂಜಿನಿ ಯರುಗಳು ಗ್ರಾಮಸ್ಥರ ಸಹಕಾರದಿಂದ ಶೀಘ್ರವಾಗಿ ನಿರ್ಮಿಸಿ ಕೊಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇರುವೆಡೆ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದರು. ಗ್ರಾಮದ ನಾಗರಿಕರು ಆಶ್ರಯ ಯೋಜ ನೆಯಡಿ ಅರ್ಜಿ ಸಲ್ಲಿಸಿದ್ದು, ಅನುಕೂಲ ಕಲ್ಪಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾ ಯಿತಿ ಸದಸ್ಯೆ ಶಶಿಕಲಾ ಸೋಮ ಲಿಂಗಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ, ಸದಸ್ಯರಾದ ರತ್ನಮ್ಮ, ಬಾಲಚಂದ್ರ ಮೂರ್ತಿ, ಮಹದೇವಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಉಪಾಧ್ಯಕ್ಷೆ ರಮ್ಯ, ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿ ಕುಮಾರ್, ಪಿಎಎ ಬ್ಯಾಂಕ್ ಅಧ್ಯಕ್ಷ ಸಿದ್ದ ಮಲ್ಲಪ್ಪ, ಎ.ಎಸ್ ಗುರುಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹ ದೇವಪ್ಪ, ಜಿಪಂ ಮಾಜಿ ಸದಸ್ಯೆ ಕಾವೇರಿ ಶಿವಕುಮಾರ್, ಮುಖಂಡರಾದ ಶಾಂತ ಮಲ್ಲಪ್ಪ, ಶಂಭಪ್ಪ, ಬಿಸಲವಾಡಿ ಉಮೇಶ್ ಮತ್ತು ಶೇಖರಪ್ಪ, ನಾರಾಯಣ್‍ನಾಯ್ಕ, ಶಿವಣ್ಣ, ಚೆನ್ನಬಸಪ್ಪ, ಗಿರಿಯಪ್ಪ, ನಗರ ಸಭಾ ಉಪಾಧ್ಯಕ್ಷ ರಾಜಪ್ಪ, ಗ್ರಾಪಂ ಸದ ಸ್ಯರುಗಳು, ಗ್ರಾಮದ ಮುಖಂಡರುಗಳು, ಮತ್ತು ಅಧಿಕಾರಿಗಳು ಹಾಜರಿದ್ದರು.

Translate »