ಬಡ ರೋಗಿಗಳ ನೆರವಿಗೆ 30 ಕೋಟಿ ಮೀಸಲು
ಮೈಸೂರು

ಬಡ ರೋಗಿಗಳ ನೆರವಿಗೆ 30 ಕೋಟಿ ಮೀಸಲು

July 6, 2018

ಬೆಂಗಳೂರು:  ಬಡ ರೋಗಿಗಳಿಗೆ ಹೃದಯ, ಮೂತ್ರಪಿಂಡ, ಯಕೃತ್ ಇತ್ಯಾದಿ ಅಂಗಾಂಗ ಕಸಿಗಾಗಿ ಪ್ರತ್ಯೇಕ ಯೋಜನೆ ರೂಪಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಯೋಜನೆಗೆ 30 ಕೋಟಿ ರೂ. ಅನುದಾನ ನೀಡಿದ್ದಾರೆ.

ರಾಮನಗರ ಜಿಲ್ಲೆ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಮೀಸಲಿರಿಸಿದ್ದಾರೆ.
ರಾಮನಗರ ದಿನದಿಂದ ದಿನಕ್ಕೆ ಶೀಘ್ರಗತಿಯಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು 40 ಕೋಟಿ ರೂ. ಒದಗಿಸಿದ್ದಾರೆ. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮೊದಲ ಹಂತವಾಗಿ ಬೋನ್ ಮ್ಯಾರೋ ಟ್ರಾನ್ಸ್‍ಪ್ಲಾಂಟ್ ಚಿಕಿತ್ಸೆಗಾಗಿ ಪ್ರತ್ಯೇಕ ಘಟಕ ಸ್ಥಾಪಿಸಲು 12 ಕೋಟಿ ರೂ. ನೀಡಿದ್ದಾರೆ.

ಔಷಧ ನಿಯಂತ್ರಣ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ 40 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಯನ್ನು ಎರಡು ವರ್ಷದಲ್ಲಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ.

Translate »