ರೈತರಿಗೆ 4 ಸಾವಿರ ರೂ. ನೆರವು ನೀಡಲು ಸರ್ಕಾರ ಆದೇಶ
ಮೈಸೂರು

ರೈತರಿಗೆ 4 ಸಾವಿರ ರೂ. ನೆರವು ನೀಡಲು ಸರ್ಕಾರ ಆದೇಶ

August 19, 2019

ಬೆಂಗಳೂರು, ಆ.18- ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೆರವು ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಫಲಾನು ಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಕಂತುಗಳಲ್ಲಿ ಹಣ ವರ್ಗಾವಣೆ ಮಾಡು ವಂತೆ ಸರ್ಕಾರ ಶನಿವಾರ ಆದೇಶಿಸಿದೆ. ಯೋಜನೆಯನ್ನು ಅನುಷ್ಠಾನಗೊಳಿ ಸಲು ಅಗತ್ಯವಾದ ಹಣವನ್ನು ಆಕಸ್ಮಿಕ ನಿಧಿಯಿಂದ ಪಡೆಯಲಾಗುತ್ತದೆ ಮತ್ತು 2019-20ರ ಪೂರಕ ಬಜೆಟ್ ಹಂಚಿಕೆ ಗಳಲ್ಲಿ ಮರು ಹೊಂದಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ. ಕೃಷಿ ಇಲಾಖೆಯ ನಿರ್ದೇಶಕರು ಈ ಯೋಜನೆಯಡಿ ವಿತರಣಾ ಅಧಿಕಾರಿಯಾಗಿರುತ್ತಾರೆ ಮತ್ತು ಹಣಕಾಸು ಇಲಾಖೆ ಆದೇಶ ಹೊರಡಿಸಿದ ನಂತರ ಅಧಿಕಾರಿಯು ಫಂಡ್‍ನ್ನು ಡ್ರಾ ಮಾಡಿಕೊಳ್ಳಬಹುದಾಗಿದೆ. ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂ. ನೀಡಲಾಗುತ್ತಿದೆ. ಇದೀಗ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಎರಡು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ 4 ಸಾವಿರ ರೂ.ಗಳನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.

Translate »