ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್: ಜಿಲ್ಲೆಗೆ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸ್ಥಾಪನೆಗೆ  50 ಕೋಟಿ ಅನುದಾನ
ಚಾಮರಾಜನಗರ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್: ಜಿಲ್ಲೆಗೆ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸ್ಥಾಪನೆಗೆ  50 ಕೋಟಿ ಅನುದಾನ

July 6, 2018

ಚಾಮರಾಜನಗರ:  ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್‍ನಲ್ಲಿ ಜಿಲ್ಲೆಗೆ ಎರಡು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಚಾಮರಾಜನಗರ, ಗದಗ, ಕೊಪ್ಪಳ ಮತ್ತು ಹಾಸನ ನಗರಗಳ ವೈದ್ಯಕೀಯ ಕಾಲೇ ಜುಗಳಲ್ಲಿ 450 ಹಾಸಿಗೆ ಸಾಮಥ್ರ್ಯದ ಹೊಸ ಆಸ್ಪತ್ರೆ ಸ್ಥಾಪಿಸಿಲಾಗುವುದು. ಇದ ಕ್ಕಾಗಿ 200 ಕೋಟಿ ರೂ. ಅನುದಾನ ನೀಡು ವುದಾಗಿ ಪ್ರಕಟಿಸಲಾಗಿದೆ. ನಾಲ್ಕು ಜಿಲ್ಲೆಗ ಳಿಂದ ಒಟ್ಟು 200 ಕೋಟಿ ರೂ. ಅನುದಾನ ನೀಡಿರುವುದರಿಂದ ಒಂದೊಂದು ಜಿಲ್ಲೆಗೆ 50 ಕೋಟಿ ರೂ. ಅನುದಾನ ಲಭ್ಯವಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಹಾಗೂ ಮಂಡ್ಯ ಜಿಲ್ಲೆಯ ಗಗನ ಚುಕ್ಕಿ ಜಲಪಾತ ಗಳ ಬಳಿ 5 ಕೋಟಿ ರೂ. ವೆಚ್ಚದಲ್ಲಿ ಹೆಚ್ಚು ವರಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿ ಸುವುದಾಗಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪ್ರಕಟಿಸಿದ್ದಾರೆ.

ಈ ಎರಡು ಜಲಪಾತಗಳಿಂದ ಒಟ್ಟು 5 ಕೋಟಿ ರೂ. ಅನುದಾನ ನೀಡಿರುವುದ ರಿಂದ ಒಂದು ಜಲಪಾತಕ್ಕೆ 2.5 ಕೋಟಿ ರೂ. ಅನುದಾನ ಲಭ್ಯವಾಗಲಿದೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿರುವ ಹೆಚ್.ಡಿ.ಕುಮಾರ ಸ್ವಾಮಿ ಅವರು ಮಂಡಿಸಿರುವ ಬಜೆಟ್ ನಲ್ಲಿ ಜಿಲ್ಲೆಗೆ ಒಟ್ಟಾರೆ 52.50 ಕೋಟಿ ರೂ. ಅನುದಾನ ಲಭ್ಯವಾಗಲಿದೆ. ಉಳಿ ದಂತೆ ಎಲ್ಲಾ ಜಿಲ್ಲೆಗಳಿಗೆ ಮತ್ತು ತಾಲೂಕು ಗಳಿಗೆ ವಿಸ್ತರಣೆ ಆದ ಯೋಜನೆಗಳು, ಕಾರ್ಯಕ್ರಮಗಳು ಜಿಲ್ಲೆಗೂ ಜಾರಿ ಆಗಲಿದೆ.

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ನಿಧಿಯ ಅನುದಾನದಡಿಯಲ್ಲಿ 96 ಕೋಟಿ ರೂ. ವೆಚ್ಚದಲ್ಲಿ 42 ನಿರಂತರ ಪರಿವೇಷ್ಟಕ ವಾಯು ಗುಣಮಟ್ಟ ಮಾಪನ ಕೇಂದ್ರ ಸ್ಥಾಪಿಸುವುದಾಗಿ ಬಜೆಟ್‍ನಲ್ಲಿ ಹೇಳ ಲಾಗಿದೆ. ಅದರಂತೆ ಚಾಮರಾಜನಗರ ಜಿಲ್ಲೆಯಲ್ಲೂ ವಾಯುಗುಣಮಟ್ಟ ಮಾಪನ ಕೇಂದ್ರ ಸ್ಥಾಪನೆ ಆಗಲಿದೆ.

ಜಿಲ್ಲಾ ಕೇಂದ್ರವಾದ ಚಾಮರಾಜನಗ ರದ ಯಡಬೆಟ್ಟದ ತಪ್ಪಲಿನಲ್ಲಿ ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭವಾಗಿದೆ. ಸರ್ಕಾರಿ ಮೆಡಿಕಲ್ ಕಾಲೇಜು ಇದ್ದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ತೆರೆಯಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಕಳೆದ ಬಜೆಟ್‍ನಲ್ಲಿ 100 ಕೋಟಿ ರೂ. ಅನು ದಾನ ಘೋಷಿಸಿ, 90 ಕೋಟಿ ರೂ.ಗಳನ್ನು ತಕ್ಷಣವೇ ಬಿಡುಗಡೆಗೊಳಿಸಲಾಗುವುದು ಎಂದು ಘೋಷಿಸಿದ್ದರು. ಈ ಬಜೆಟ್ ನಲ್ಲೂ ಸಹ ಮುಖ್ಯಮಂತ್ರಿ ಕುಮಾರ ಸ್ವಾಮಿ ಚಾಮರಾಜನಗರ ಜಿಲ್ಲೆ ಸೇರಿ ದಂತೆ 4 ಜಿಲ್ಲೆಗಳ ಮೆಡಿಕಲ್ ಕಾಲೇಜು ಗಳಲ್ಲಿ 450 ಹಾಸಿಗೆ ಸಾಮಥ್ರ್ಯದ ಹೊಸ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 200 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ಇದು ಜಿಲ್ಲೆಗೆ ದೊರೆತ ಹೆಚ್ಚುವರಿ ಅನುದಾನ ಎನ್ನಲಾಗಿದೆ.

ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬಳಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಿಸಲು ಈಗಾಗಲೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಹಿಂದೆ ಜಿಲ್ಲಾ ಉಸ್ತು ವಾರಿ ಸಚಿವರಾಗಿದ್ದ ಡಾ.ಗೀತಾಮಹದೇವ ಪ್ರಸಾದ್ ಗುದ್ದಲಿ ಪೂಜೆ ನೆರವೇರಿಸಿ ದ್ದಾರೆ. ಗುದ್ದಲಿ ಪೂಜೆ ನೆರವೇರಿದ ದಿನವೇ ವಿಧಾನಸಭೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿ ದ್ದನ್ನು ಇಲ್ಲಿ ಸ್ಮರಿಸಬಹುದು.

ಭರಚುಕ್ಕಿ ಜಲಪಾತ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಮಳೆಗಾಲದಲ್ಲಿ ಜಲಪಾತದ ಮೇಲಿಂದ ಕಾವೇರಿ ನೀರು ಧುಮ್ಮಿಕ್ಕುವ ಆ ರಮಣೀಯ ದೃಶ್ಯವನ್ನು ನೋಡುವುದೇ ಒಂದು ಚೆಂದ. ಈ ಚೆಂದವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಎಲ್ಲೆಡೆ ಯಿಂದ ಪ್ರವಾಸಿಗರು ಈ ಸ್ಥಳಕ್ಕೆ ಆಗ ಮಿಸುತ್ತಾರೆ. ಚಾಮರಾಜನಗರ ಜಿಲ್ಲೆಯ ಭರಚುಕ್ಕಿ ಮತ್ತು ಮಂಡ್ಯ ಜಿಲ್ಲೆಯ ಗಗನಚುಕ್ಕಿ ಜಲಪಾತದ ಬಳಿ 5 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಪ್ರವಾಸಿ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯ ಮಂತ್ರಿ ಹೆಚ್‍ಡಿಕೆ ಘೋಷಿಸಿದ್ದಾರೆ.

Translate »