ಮನೆಗಳ್ಳನಿಂದ 6 ಲಕ್ಷ ರೂ. ಚಿನ್ನಾಭರಣ ವಶಕ್ಕೆ
ಮೈಸೂರು

ಮನೆಗಳ್ಳನಿಂದ 6 ಲಕ್ಷ ರೂ. ಚಿನ್ನಾಭರಣ ವಶಕ್ಕೆ

October 6, 2018

ಮೈಸೂರು: ಮನೆಯೊಂದರಲ್ಲಿ 6 ಲಕ್ಷ ರೂ., ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನನ್ನು ಸಿಸಿಬಿ ಪೊಲೀಸರು ಬಂಧಿಸಿ, ಈತನಿಂದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿ ಎಲ್.ವೆಂಕಟೇಶ್ ಅಲಿಯಾಸ್ ಲಾಂಗ್ ವೆಂಕಟೇಶ(50) ಬಂಧಿತ ವ್ಯಕ್ತಿ. ಅ.4 ರಂದು ಮಹದೇಶ್ವರ ಬೆಟ್ಟದಲ್ಲಿ ಆರೋಪಿ ವೆಂಕಟೇಶ್‍ನನ್ನು ಬಂಧಿಸಿ, ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಮಂಡಿಮೊಹಲ್ಲಾದ ಮನೆಯೊಂದರಲ್ಲಿ 6 ಲಕ್ಷ ರೂ. ಮೌಲ್ಯದ ಬೆಲೆಬಾಳುವ ಚಿನ್ನಾಭರಣ ಮತ್ತು ಬೆಳ್ಳಿ ಪದಾರ್ಥಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ ನೀಡಿದ ಮಾಹಿತಿ ಮೇರೆಗೆ ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈತ ಹಳೆಯ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದ ಬಗ್ಗೆ ವಿಚಾರಣೆಯಿಂದ ತಿಳಿದು ಬಂದಿದೆ.

Translate »