ಮಡಿಕೇರಿಯಲ್ಲಿ ಸಚಿವರಾದ ಆರ್.ವಿ.ದೇಶಪಾಂಡೆ, ಸಾರಾ ಮಹೇಶ್ ಅಧಿಕಾರಿಗಳ ಸಭೆ ಜನರ ರಕ್ಷಣೆಗೆ ಸರ್ವ ಪ್ರಯತ್ನ

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪ್ರವಾಹ ಹಾಗೂ ಭೂಕುಸಿತಕ್ಕೆ ಸಿಲುಕಿರುವ ಜಿಲ್ಲೆಯ ಹಲವು ಗ್ರಾಮಗಳ ಜನರನ್ನು ಸುರಕ್ಷಿತವಾಗಿ ಕರೆತರಲು ಈಗಾಗಲೇ ಕ್ವಿಕ್ ರೆಸ್ಪಾನ್ಸ್ ತಂಡ, ಮಿಲಿಟರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಅತಿವೃಷ್ಟಿಗೆ ಸಿಲುಕಿರುವವರ ಜೀವ ರಕ್ಷಣೆಗೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವರು ಮಾಹಿತಿ ನೀಡಿದರು. ಜಿಲ್ಲೆಯ ಮುಕ್ಕೊಡ್ಲು, ಗಾಳಿಬೀಡು, ಕಾಲೂರು, ಮಕ್ಕಂದೂರು, ಮಾದಾಪುರ, ಹಟ್ಟಿಹೊಳೆ, ಎರಡನೇ ಮೊಣ್ಣಂಗೇರಿ, ದೇವ ಸ್ತೂರು, ಚೆರಿಯಪರಂಬು, ಕಣಿವೆ, ನೆಲ್ಯ ಹುದಿಕೇರಿ, ಗುಹ್ಯ ಮತ್ತಿತರ ಕಡೆಗಳಲ್ಲಿ ಅತಿವೃಷ್ಟಿಗೆ ಸಿಲುಕಿರುವ ಬಗ್ಗೆ ಮಾಹಿತಿ ಇದ್ದು, ಸಂತ್ರಸ್ಥರನ್ನು ಕರೆತರಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡಿದೆ. ಆ ನಿಟ್ಟಿನಲ್ಲಿ ವಿವಿಧ ಕಡೆಗಳಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಕಂದಾಯ ಸಚಿವರು ವಿವರಿಸಿದರು.

ಮಡಿಕೇರಿ ಬಳಿ ಬಡಾವಣೆಯೊಂದು ಜಲಾವೃತವಾಗಿರುವುದು.

ಈಗಾಗಲೇ ಕರೆತರಲಾಗಿರುವ ಸಂತ್ರಸ್ಥರಿಗೆ 20 ಕಡೆಗಳಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು, ಊಟ, ಉಪಹಾರ, ಬಟ್ಟೆ, ಬೆಡ್ ಶೀಟ್ ಮತ್ತಿತರ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ. ಜೊತೆಗೆ ಸರ್ಕಾರೇ ತರ ಸಂಸ್ಥೆಗಳು ಸಹ ಮುಂದೆ ಬಂದಿವೆ ಎಂದು ಆರ್.ವಿ.ದೇಶಪಾಂಡೆ ಅವರು ತಿಳಿಸಿದರು.

ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್‌ಗಳು ಜಿಲ್ಲೆಗೆ ಬರಲು ಸಾಧ್ಯವಾಗಿಲ್ಲ, ಆದ್ದರಿಂದ ಸಂತ್ರಸ್ತರನ್ನು ರಕ್ಷಿಸುವ ನಿಟ್ಟಿನಲ್ಲಿ ಹತ್ತಿರದ ಮೈಸೂರು ಮತ್ತು ಹಾಸನ ಜಿಲ್ಲೆಗಳಿಂದ ಕಂದಾಯ ಹಾಗೂ ಪಂಚಾ ಯತ್ ರಾಜ್ ಸಿಬ್ಬಂದಿಗಳನ್ನು ನಿಯೋ ಜಿಸಲಾಗುವುದು ಹಾಗೆಯೇ ವೈದ್ಯರು, ಶುಶ್ರ್ರೂ ಷಕರು ಹಾಗೂ ಇತರರನ್ನು ನಿಯೋಜಿಸಲು ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಕಂದಾಯ ಸಚಿವರು ಹೇಳಿದರು.

ಕಾಫಿ ತೋಟ ಜಲಾವೃತವಾಗಿರುವುದು.

ಕೊಡಗು ಜಿಲ್ಲೆಯ ಜನರು ಸಂಕಷ್ಟ ಪರಿಸ್ಥಿತಿಯಲ್ಲಿದ್ದು, ಇವರ ಜೀವ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಸಂತ್ರಸ್ಥರಿಗೆ ಔಷಧಿ, ಆಹಾರ ಪೂರೈಕೆ, ಸೀಮೆಎಣ್ಣೆ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಾಗೆಯೇ ಕಾರವಾರದಿಂದ ನೌಕಾಪಡೆ ಆಗಮಿಸಲಿದೆ. ಜೊತೆಗೆ ಯೋಧರು ಬರಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಸರ್ಕಾರದಿಂದ ಯಾವುದೇ ರೀತಿಯ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು. ಆ ದಿಸೆಯಲ್ಲಿ ಎಲ್ಲರೂ ಕೈಜೋಡಿಸುವಂತೆ ಕಂದಾಯ ಸಚಿವರು ಮನವಿ ಮಾಡಿದರು.

ಭಾರೀ ಮಳೆಗೆ ಮನೆಯೊಂದು ಕುಸಿದಿರುವುದು.

ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್ ಅವರು ಪ್ರವಾಹಕ್ಕೆ ಸಿಲುಕಿರುವವರನ್ನು ಕರೆತರಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಕರೆ ತರಲಾಗಿರುವ ಸಂತ್ರಸ್ಥರಿಗೆ ಊಟೋಪ ಚಾರ ಹಾಗೂ ಅಗತ್ಯ ವಸ್ತುಗಳನ್ನು ಒದಗಿ ಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕಳೆದ ಎರಡು-ಮೂರು ದಿನಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ 4 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಕಾಣೆಯಾಗಿ ದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಮಡಿಕೇರಿ ಬಳಿ ಗುಡ್ಡ ಕುಸಿಯುತ್ತಿದ್ದು, ಬೀಳುವ ಸ್ಥಿತಿಯಲ್ಲಿರುವ ಮನೆ.

ಸುದ್ದಿಗೋಷ್ಠಿಗೂ ಮೊದಲು ಶಾಸಕ ರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾದಾಪುರ, ಮುಕ್ಕೊಡ್ಲು, ಹಟ್ಟಿಹೊಳೆ, ಕಾಲೂರು ಇತರೆ ಕಡೆಗಳಲ್ಲಿ ಪ್ರವಾಹಕ್ಕೆ ತುತ್ತಾಗಿದ್ದು ಇವರನ್ನು ತ್ವರಿವಾಗಿ ಸ್ಥಳಾಂ ತರ ಮಾಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಸೇನಾ ಪಡೆ ನಿಯೋಜಿಸುವುದು, ಹಾಗೂ ಜೆಸಿಬಿ ತರಿಸಬೇಕಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಸಂತ್ರಸ್ಥರನ್ನು ಕರೆತರಲು ತಾಂತ್ರಿಕವಾಗಿ ಕಾರ್ಯ ಪ್ರವೃತ್ತ ರಾಗಬೇಕಿದೆ. ಆ ನಿಟ್ಟಿನಲ್ಲಿ ಕೂಡಲೇ ಪ್ರಯತ್ನ ಮಾಡಬೇಕಿದೆ ಎಂದು ಅವರು ಹೇಳಿ ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸುಮನ್ ಡಿ.ಪೆನ್ನೇಕರ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಇತರರು ಇದ್ದರು.