ಅಚ್ಚರಿ ಆಯ್ಕೆ ಮಾಜಿ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ಚೀನಾ ಜತೆಗಿನ ಬಿಕ್ಕಟ್ಟು ಬಗೆಹರಿಸುವುದರಲ್ಲಿ ಪ್ರಮುಖ ಪಾತ್ರ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಜಿ ಕಾರ್ಯದರ್ಶಿ ಎಸ್.ಜೈಶಂಕರ್ ಅಚ್ಚರಿಯ ಆಯ್ಕೆ ಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದ ಅಂಗಳದಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಜೈಶಂಕರ್ 2015ರ ಜನ ವರಿಯಿಂದ 2018ರ ಜನವರಿವ ರೆಗೆ ವಿದೇಶಾಂಗ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ದೇಶದ ವಿದೇಶಾಂಗ ನೀತಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲಡಾಕ್‍ನ ದೆಪ್‍ಸಾಂಗ್ ಮತ್ತು ಡೋಕ್ಲಾಮ್‍ನಲ್ಲಿ ಚೀನಾದೊಂದಿಗೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

1977ರಲ್ಲಿ ಭಾರತೀಯ ವಿದೇಶಾಂಗ ಸೇವೆಗೆ ಸೇರ್ಪಡೆಯಾದ ಜೈಶಂಕರ್, ಸಿಂಗಾಪುರ, ಚೀನಾ, ಅಮೆರಿಕದಲ್ಲಿ ಭಾರತೀಯ ರಾಯಭಾರಿಯಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿದ್ದಾರೆ. ನಿವೃತ್ತಿ ಬಳಿಕ ಜೈಶಂಕರ್, ಟಾಟಾ ಸಮೂಹದ ಗ್ಲೋಬಲ್ ಕಾರ್ಪೊರೇಟ್ ಅಫೇರ್ಸ್ ಅಧ್ಯಕ್ಷರಾದರು.