ಸದಾಶಿವ ಸ್ವಾಮೀಜಿಗಳ ಅಂತ್ಯಕ್ರಿಯೆ
ಮಂಡ್ಯ

ಸದಾಶಿವ ಸ್ವಾಮೀಜಿಗಳ ಅಂತ್ಯಕ್ರಿಯೆ

July 6, 2018

ಪಾಂಡವಪುರ: ತಾಲೂಕಿನ ಬೇಬಿಬೆಟ್ಟದ ಸದಾಶಿವ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬೇಬಿ ಬೆಟ್ಟದ ಶ್ರೀರಾಮಯೋಗಿಶ್ವರ ಮಠದ ಆವರಣದಲ್ಲಿ ನಡೆಯಿತು.ರಾಜ್ಯದ ನಾನಾ ಭಾಗಗಳಿಂದ ಆಗಮಿ ಸಿದ್ದ ವಿವಿಧ ಮಠಗಳ ಮಠಾಧೀಶರು, ಮಠದ ಭಕ್ತರು ಹಾಗೂ ಸಾರ್ವಜನಿಕರು ಮಠದ ಆವರಣದಲ್ಲಿ ಇಡಲಾಗಿದ್ದ ಸದಾ ಶಿವ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಬಳಿಕ ಬೆಳಿಗ್ಗೆ 11.30ರ ವೇಳೆಗೆ ಸ್ವಾಮೀಜಿ ಅವರ ಮೃತದೇಹವನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮಠದ ಆವರಣದಲ್ಲಿ ಒಂದು ಸುತ್ತು ಮೆರವಣಿಗೆ ನಡೆಸಲಾಯಿತು. ನಂತರ ಮಠದ ಪಕ್ಕದಲ್ಲಿ ನಿರ್ಮಿಸಿದ್ದ ಸಮಾಧಿಗೆ ತಂದು ಕೂರಿಸಿ ವಿಭೂತಿ, ಬಿಲ್ವಪತ್ರೆಯಲ್ಲಿ ಮುಚ್ಚಿ ಮಧ್ಯಾಹ್ನ 1.20ರವರೆÀಗೆ ಭಕ್ತರಿಗೆ, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವ ಕಾಶ ಮಾಡಿಕೊಡಲಾಗಿತ್ತು. ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು.

ಸಚಿವರಿಂದ ಅಂತಿಮ ದರ್ಶನ: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಬುಧ ವಾರ ರಾತ್ರಿ ಬೇಬಿಬೆಟ್ಟಕ್ಕೆ ತೆರಳಿ ಶ್ರೀ ಸದಾಶಿವ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.ನಂತರ ಮಾತನಾಡಿದ ಅವರು, ಬೇಬಿ ಬೆಟ್ಟದ ಶ್ರೀರಾಮಯೋಗಿಶ್ವರ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀಸದಾಶಿವ ಸ್ವಾಮೀಜಿ ಅವರು ಸರಳ ಸಜ್ಜನಿಕೆಯುಳ್ಳವರಾಗಿ ದ್ದರು. ಮರೀದೇವರು ಸ್ವಾಮೀಜಿಗಳ ಶಿಷ್ಯರಾಗಿ ಇಲ್ಲಿಗೆ ಆಗಮಿಸಿದ್ದ ಸದಾಶಿವ ಸ್ವಾಮೀಜಿಗಳು ಈ ಭಾಗದಲ್ಲಿ ಧರ್ಮ ಪ್ರಚಾರ ನಡೆಸುವ ಮೂಲಕ ಮಠ ಅಭಿ ವೃದ್ಧಿ ಪಡಿಸಿ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಅಗಲಿಗೆ ತಮಗೆÉ ವೈಯುಕ್ತಿಕವಾಗಿ ನೋವುಂಟು ಮಾಡಿದೆ ಎಂದು ವಿಷಾದಿಸಿದರು.

ಅಂತಿಮ ದರ್ಶನ ಪಡೆದ ಗಣ್ಯರು: ಯಡಿಯೂರಪ್ಪ ಪುತ್ರ ವಿಜಯೇಂದ್ರ, ಮಠಾಧೀಶರಾದ ಕನಕಪುರದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಅವ್ವೇರಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ, ಕೊಡಗಿನ ಶಾಂತವೀರ ಸ್ವಾಮೀಜಿ, ತೆಂಡೆಕೆರೆ ಮಠದ ಶಿವಾಚಾರ್ಯ ಸ್ವಾಮೀಜಿ, ಟಿ.ನರಸೀಪುರದ ಮೋದ್ರಿ ಮಠದ ಶಿವಲಿಂಗ ಸ್ವಾಮೀಜಿ, ಬೆಳಕವಾಡಿ ಮಠದ ಪ್ರಭುದೇವ ಸ್ವಾಮೀಜಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಸದಾಶಿವ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದರು.

Translate »