ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ
ಮೈಸೂರು

ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ

October 2, 2021

ಮುಂಬರುವ ಸ್ಥಳೀಯ ಸಂಸ್ಥೆಗಳಿAದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದಲೇ ಕಣಕ್ಕಿಳಿಯಲು ಕಸರತ್ತು
ಆರ್.ರಘು ಕೌಟಿಲ್ಯ, ಸಿ.ಬಸವೇಗೌಡರೂ ಮೈಸೂರು-ಚಾ.ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

ಬಿಜೆಪಿಗೆ ಬರ್ತೀನಿ, ಮತ್ತೆ ಮೂರನೇ ಬಾರಿ ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಯಿAದ ಗೆದ್ದು ಬರ್ತೀನಿ. ಜನವರಿ ೫ರ ತನಕ ಜೆಡಿಎಸ್ ಸದಸ್ಯನಾಗಿ ಇರ್ತೀನಿ, ಕಳೆದ ಒಂದೂವರೆ ವರ್ಷದಿಂದ ನಾನು ಜೆಡಿಎಸ್ ನಿಂದ ದೂರ ಇದ್ದೀನಿ, ನಾಯಕರ ಸಂಪರ್ಕ ದಲ್ಲಿ ಇಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹಾಗೂ ರಾಜ್ಯಾಧ್ಯಕ್ಷರ ಭೇಟಿ ಮಾಡಬೇಕಿತ್ತು. ಇಬ್ಬರೂ ಸಿಗಲಿಲ್ಲ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ. –  ಸಂದೇಶ್ ನಾಗರಾಜ್, ವಿಧಾನಪರಿಷತ್ ಸದಸ್ಯ

ಬೆಂಗಳೂರು, ಅ. ೧(ಕೆಎಂಶಿ)- ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಪಕ್ಷ ತೊರೆದು, ಬಿಜೆಪಿ ಸೇರಲು ಮುಂದಾ ಗಿದ್ದಾರೆ. ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯ ದರ್ಶಿ ಅರುಣ್ ಕುಮಾರ್ ಸೇರಿದಂತೆ ಕೆಲವು ಮುಖಂಡರನ್ನು ಭೇಟಿ ಮಾಡಿ ಪಕ್ಷ ಸೇರಲು ಒಲವು ತೋರಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್, ಪಕ್ಷಕ್ಕೆ ಸಂದೇಶ್ ಅವರನ್ನು ಸೇರಿಸಿ ಕೊಂಡು ಮುಂಬರುವ ಸ್ಥಳೀಯ ಸಂಸ್ಥೆ ಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಆಸಕ್ತರಾಗಿದ್ದಾರೆ.

ಅಶೋಕ್ ಅವರ ಮಧ್ಯಸ್ಥಿಕೆಯಿಂದಲೇ ಪಕ್ಷದ ಮುಖಂಡರನ್ನು ಸಂದೇಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ. ಮೈಸೂರು, ಚಾಮರಾಜನಗರ ಸ್ಥಳೀಯ ಸಂಸ್ಥೆಗಳಿAದ ವಿಧಾನ ಪರಿಷತ್ತಿಗೆ ಜೆಡಿಎಸ್‌ನಿಂದ ಆಯ್ಕೆಗೊಂಡಿದ್ದ ಸಂದೇಶ್ ಅವರ ಪ್ರಸ್ತುತ ಸದಸ್ಯತ್ವ ಅವಧಿ ಡಿಸೆಂಬರ್‌ಗೆ ಕೊನೆಗೊಳ್ಳಲಿದೆ. ವಿಧಾನಮಂಡಲದ ಮುಂಬರುವ ಚಳಿಗಾಲದ ಅಧಿವೇಶನದ ನಂತರ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ ಸ್ಥಳೀಯ ಸಂಸ್ಥೆಗಳಿAದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣಾ ಕಣಕ್ಕಿಳಿಯಲು ಬಿಜೆಪಿ ಯಲ್ಲೇ ಹಲವರು ಟಿಕೆಟ್ ಪಡೆಯಲು ಪ್ರಯತ್ನ ನಡೆಸಿರುವ ಬೆನ್ನಲ್ಲೇ ಸಂದೇಶ್ ಪ್ರವೇಶ ಮಾಡಿದ್ದಾರೆ. ಸ್ಥಳೀಯ ಸಂಸ್ಥೆಗಳಿAದ ರಾಜ್ಯ ವಿಧಾನ ಪರಿಷತ್ತಿನ ೨೫ ಸ್ಥಾನಗಳಿಗೆ ಸದ್ಯದಲ್ಲೇ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಲಾಬಿ ಆರಂಭವಾಗಿದ್ದು, ಮೈಸೂರು-ಚಾಮರಾಜನಗರ ಕ್ಷೇತ್ರದಿಂದ ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ, ಮಾಜಿ ಸಿಎಂ ಯಡಿ ಯೂರಪ್ಪ ಅವರ ಮೂಲಕ ಭಾರೀ ಪ್ರಯತ್ನ ಮಾಡಿದ್ದಾರೆ. ಹಿರಿಯ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು, ಸಿ. ಬಸವೇಗೌಡರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದು ಇದರಿಂದ ಮೈಸೂರು-ಚಾಮರಾಜನಗರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಬೆಳೆಯುತ್ತಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಸಂದೇಶ್ ನಾಗರಾಜ್ ಅವರನ್ನು ತರಾತುರಿಯಲ್ಲಿ ಬಿಜೆಪಿ ಪಾಳೆಯಕ್ಕೆ ಸೆಳೆದು ಅವರಿಗೆ ಟಿಕೆಟ್ ಕೊಡಿಸಲು ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೆಲವು ಸ್ಥಳೀಯ ಒಕ್ಕಲಿಗ ನಾಯಕರು ಉತ್ಸುಕರಾಗಿದ್ದು, ಬಿಜೆಪಿ ಪಾಳೆಯದಲ್ಲಿ ಕುತೂಹಲಕ್ಕೆ ಕಾರಣ ವಾಗಿದೆ. ಕೆಲವು ದಿನಗಳ ಹಿಂದೆ ಶಾಂತವಾಗಿದ್ದ ಟಿಕೆಟ್ ಆಕಾಂಕ್ಷಿಗಳು ಈಗ ಬಿರುಸಿನ ಲಾಬಿ ಆರಂಭಿಸಿದ್ದು, ಯಾರಿಗೆ ಟಿಕೆಟ್ ಲಭ್ಯವಾಗಲಿದೆ ಎಂಬ ಕುತೂಹಲ ಎದುರಾಗಿದೆ.

Translate »