ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ‘ಸಂಗೀತ ವಿದ್ವಾನ್’ ಪ್ರಶಸ್ತಿ
ಮೈಸೂರು

ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ‘ಸಂಗೀತ ವಿದ್ವಾನ್’ ಪ್ರಶಸ್ತಿ

October 10, 2018

ಮೈಸೂರು: ಪ್ರತಿ ದಸರಾ ಮಹೋತ್ಸವದ ವೇಳೆ ನೀಡ ಲಾಗುವ ‘ಸಂಗೀತ ವಿದ್ವಾನ್’ ಪುರ ಸ್ಕಾರಕ್ಕೆ ಈ ಸಾಲಿನಲ್ಲಿ ಮೈಸೂರಿನ ಹೆಸರಾಂತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾ ಖೆಯು ಇಂದು ಪಂಡಿತ್ ರಾಜೀವ್ ತಾರಾನಾಥ್ ಹೆಸರನ್ನು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ. ನಾಳೆ (ಅ.10) ಸಂಜೆ ಅರಮನೆ ಆವರಣದಲ್ಲಿ ನಡೆಯಲಿರುವ ದಸರಾ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಬೇಕಾಗಿತ್ತು. ಆದರೆ ರಾಜೀವ್ ತಾರಾನಾಥ್ ಅವರು ಅಮೆರಿಕಾದಲ್ಲಿರುವುದರಿಂದ ಅವರು ಮೈಸೂರಿಗೆ ಹಿಂದಿರುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಡಳಿತದ ಪರವಾಗಿ ಪ್ರತ್ಯೇಕವಾಗಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ಮೂಲಗಳು ತಿಳಿಸಿವೆ.

1932ರ ಅಕ್ಟೋಬರ್ 17ರಂದು ಜನಿಸಿದ ಪಂಡಿತ್ ರಾಜೀವ್ ತಾರಾನಾಥ್ ಅವರು, ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಆರಂಭದಲ್ಲಿ ಓಕಲ್ ಮ್ಯೂಸಿಕ್ ತರಬೇತಿ ಪಡೆದು ತಮ್ಮ ಒಂಭತ್ತನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಸಂಗೀತ ಕಾರ್ಯಕ್ರಮ ನೀಡಿದ್ದರು.

ಸಾಹಿತ್ಯದಲ್ಲಿ ಪಿಹೆಚ್.ಡಿ ಪಡೆದು, ಇಂಗ್ಲೀಷ್ ಸಾಹಿತ್ಯ ಪ್ರಾಧ್ಯಾಪಕರಾಗಿ, ನಂತರ ಕೊಲ್ಕತ್ತಾಗೆ ತೆರಳಿ ಅಲ್ಲಿ ಅಲಿ ಅಕ್ಬರ್ ಖಾನ್ ಅವರ ಅಧೀನದಲ್ಲಿ ಸಂಗೀತಾಭ್ಯಾಸ ಮಾಡಿದ್ದ ಪಂಡಿತ್ ರಾಜೀವ್ ತಾರಾನಾಥ್, ಮುಂದೆ ಖ್ಯಾತ ಸರೋದ್ ವಾದಕರಾಗಿ ಸಂಗೀತದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ.

Translate »