ಬಿ.ವೈ.ವಿಜಯೇಂದ್ರ ಅಭಿಮಾನಿಗಳಿಂದ ನಿರಾಶ್ರಿತರಿಗೆ ಸ್ಯಾನಿಟೈಸರ್ ವಿತರಣೆ
ಮೈಸೂರು

ಬಿ.ವೈ.ವಿಜಯೇಂದ್ರ ಅಭಿಮಾನಿಗಳಿಂದ ನಿರಾಶ್ರಿತರಿಗೆ ಸ್ಯಾನಿಟೈಸರ್ ವಿತರಣೆ

April 13, 2020

ಮೈಸೂರು,ಏ.12(ಎಂಟಿವೈ)-ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೀಡಾಗಿದ್ದವರಿಗಾಗಿ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದಲ್ಲಿ ಸ್ಥಾಪಿಸಲಾಗಿರುವ ಪುನ ರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ 120 ಮಂದಿಗೆ ಬಿ.ವೈ.ವಿಜಯೇಂದ್ರ ಅಭಿಮಾನಿ ಬಳಗದ ವತಿಯಿಂದ ಸ್ಯಾನಿಟೈಸರ್ ವಿತರಿಸಲಾಯಿತು.

ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಹಾಗೂ ರಾಜ್ಯ ಬಿಜೆಪಿ ಸಹ ವಕ್ತಾರ ಆರ್.ರಘು ಕೌಟಿಲ್ಯ ನೇತೃತ್ವ ದಲ್ಲಿ ಭಾನುವಾರ ಬೆಳಿಗ್ಗೆ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅಭಿ ಮಾನಿ ಬಳಗದ ಕಾರ್ಯಕರ್ತರು, ಆಶ್ರಯ ಪಡೆ ದಿರುವವರಿಗೆ ಸ್ಯಾನಿಟೈಸರ್ ವಿತರಿಸಿ ಶುಚಿತ್ವ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ಇದೇ ವೇಳೆ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಮಾತ ನಾಡಿ, ಯುವ ನಾಯಕರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ರಾಜ್ಯದಾದ್ಯಂತ ಬಿಜೆಪಿ ಯುವ ಮೋರ್ಚಾ ಹಾಗೂ ವಿಜಯೇಂದ್ರ ಅಭಿ ಮಾನಿಗಳು ಅನಾರೋಗ್ಯ ಪೀಡಿತರಿಗೆ ಉಚಿತವಾಗಿ ಔಷಧಿ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ವಿವಿಧ ತಂಡಗಳು ಅಗತ್ಯವುಳ್ಳವರಿಗೆ ಔಷಧಿ, ದಿನಸಿ ಸೇರಿದಂತೆ ವಿವಿಧ ವಸ್ತುಗಳನ್ನು ವಿತರಿಸುತ್ತಿವೆ. ಇಂದು ಪುನರ್ವಸತಿ ಕೇಂದ್ರದ ನಿವಾಸಿಗಳಿಗೆ ಸ್ಯಾನಿಟೈಸರ್ ನೀಡಲಾಗಿದೆ. ನಗರ ಬಿಜೆಪಿ ಘಟಕದ ವತಿಯಿಂದಲೂ ಆಹಾರ ವಿತರಣೆ, ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಸಹ ವಕ್ತಾರ ಆರ್.ರಘು ಕೌಟಿಲ್ಯ ಮಾತನಾಡಿ, ಕೊರೊನಾ ಮಹಾಮಾರಿ ವಿಶ್ವವನ್ನೇ ಕಂಗೆಡಿಸಿದೆ. ಕೋಟ್ಯಾಂತರ ಮಂದಿ ಸಂಕಷ್ಟಕ್ಕೀಡಾಗಿ ದ್ದಾರೆ. ಬೇರೆ ಬೇರೆ ದೇಶಗಳಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಕೊರೊನಾ ವೈರಾಣು ಉಗ್ರ ಸ್ವರೂಪ ತಾಳದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಹಂತದಲ್ಲಿ 21 ದಿನ ದೇಶದಲ್ಲಿ ಲಾಕ್‍ಡೌನ್ ಮಾಡುವ ಮೂಲಕ ಕಠಿಣ ಕ್ರಮ ಕೈಗೊಂಡ ಫಲವಾಗಿ ಇಂದು ಸೋಂಕು ನಿಯಂತ್ರಣಕ್ಕೆ ಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನರ ಹಿತ ಕಾಯುವ ನಿಟ್ಟಿನಲ್ಲಿ ಕೈಗೊಂಡ ನಿರ್ಧಾರವೂ ಶ್ಲಾಘನೀಯ. ಈ ನಡುವೆ ಬಿ.ವೈ.ವಿಜಯೇಂದ್ರ ಅವರ ನಿಲುವು ಅನಾರೋಗ್ಯ ಪೀಡಿತರಿಗೆ ಆಪತ್ಕಾಲದ ಸಂಜೀ ವಿನಿಯಂತೆ ಭಾಸವಾಗುತ್ತಿದೆ. ಅಗತ್ಯವುಳ್ಳವರಿಗೆ ಮನೆಗೆ ಔಷಧಿ ತಲುಪಿಸುವ ಕೆಲಸವನ್ನು ವಿಜ ಯೇಂದ್ರ ಅಭಿಮಾನಿಗಳು ಮಾಡುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಂ.ವಿ. ರವಿಶಂಕರ್, ಎಂ.ಅಪ್ಪಣ್ಣ, ಗೋಕುಲ್ ಗೋವರ್ಧನ್, ಜಯಶಂಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Translate »