ಗುಂಡ್ಲುಪೇಟೆ: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಎಸ್ಸಿ ಮತ್ತು ಎಸ್ಟಿ ಬಡಾವಣೆಯ ರಸ್ತೆಗಳನ್ನು ಉತ್ತಮವಾಗಿ ಕಾಂಕ್ರೀಟಿಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್ ನಿರಂಜನ್ ಕುಮಾರ್ ಹೇಳಿದರು.
ತಾಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಪರಿ ಶಿಷ್ಠ ಜಾತಿ ಮತ್ತು ಪಂಗಡಗಳ ಬಡಾವಣೆಯ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾವು ಶಾಸಕರಾಗಿ ಆಯ್ಕೆಯಾದ ನಂತರ ಗ್ರಾಮೀಣ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ವರ್ಗದವರ ಬಡಾವಣೆಗಳ ರಸ್ತೆಗಳನ್ನೂ ಕಾಂಕ್ರೀ ಟಿಕರಣ ಮಾಡಲಾಗುವುದು ಎಂದರು.
ಕಾಡಂಚಿನ ಭಾಗದಲ್ಲಿ ವನ್ಯಜೀವಿಗಳ ಹಾವಳಿ ಹೆಚ್ಚಾಗುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಮಾತನಾಡಿದ್ದು, ರಾತ್ರಿ ಗಸ್ತು ಹೆಚ್ಚಿಸುವುದು, ಅಗತ್ಯವಿರುವ ಕಡೆಗಳಲ್ಲಿ ಕಂದಕ ನಿರ್ಮಾಣ ಮತ್ತು ರೈಲ್ವೇ ಕಂಬಿಯ ಬ್ಯಾರಿಕೇಡ್ ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. ಕ್ಷೇತ್ರದ ಲ್ಲಿನ ಉದ್ದೇಶಿತ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯು ಮುಕ್ತಾಯದ ಹಂತದಲ್ಲಿದೆ. ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯು ಪೂರ್ಣ ಗೊಂಡ ತಕ್ಷಣ ಕೆರೆಗಳಿಗೆ ನೀರು ಹರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾ ಧ್ಯಕ್ಷ ಎನ್.ಮಲ್ಲೇಶ್, ಮುಖಂಡ ಕೆ.ಆರ್. ಲೋಕೇಶ್, ತಾ.ಪಂ ಸದಸ್ಯ ಎಸ್.ಎಸ್.ಮಧು ಶಂಕರ್, ಮಾಜಿ ಸದಸ್ಯ ಸಿ.ಮಹದೇವಪ್ರಸಾದ್, ಶಿವನಾಗಪ್ಪ ಸೇರಿದಂತೆ ಹಲವರು ಇದ್ದರು.