ಮಂಗಳೂರು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ
ಮೈಸೂರು

ಮಂಗಳೂರು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

September 7, 2019

ಮಂಗಳೂರು, ಸೆ. 6- ಅಚ್ಚರಿಯ ಬೆಳವಣಿಗೆಯಲ್ಲಿ ಮಂಗಳೂರು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ನೈತಿಕವೆಂದು ನನಗೆ ಅನಿಸುತ್ತಿಲ್ಲ. ಸಂವಿಧಾನದ ಮೂಲ ಆಶಯ ಗಳು ಕಾಣೆಯಾಗುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸುತ್ತಿರುವು ದಾಗಿ ಸೆಂಥಿಲ್ ಕಾರಣವನ್ನು ತಿಳಿಸಿದ್ದಾರೆ. 2009ರ ಬ್ಯಾಚಿನ ಈ ಅಧಿಕಾರಿ 2017 ಅಕ್ಟೋಬರ್ ತಿಂಗಳಿಂದ ಮಂಗಳೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳೂರು ಪ್ರವಾಹ, ಕೋಮುಗಲಭೆ, ನಿಫಾ ವೈರಸ್ ವಿರುದ್ಧ ಹೋರಾಡಿದ ಸಸಿಕಾಂತ್ ಸೆಂಥಿಲ್ ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕ ವಾಗಿ ಕರ್ತವ್ಯ ನಿರ್ವಹಿಸಿದ ಕೀರ್ತಿ ಹೊಂದಿದ್ದರು. ಲೋಕಸಭಾ ಚುನಾವಣೆ ಬಳಿಕ ಖಡಕ್ ಪೆÇಲೀಸ್ ಅಧಿಕಾರಿ ಎಂದೇ ಹೆಸರಾಗಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿದ್ದರು. ಆದರೆ, ಅಣ್ಣಾಮಲೈ ರಾಜೀನಾಮೆಗೆ ಸ್ಪಷ್ಟ ಕಾರಣ ನೀಡಿರಲಿಲ್ಲ.

ಇನ್ನು 15 ದಿನಗಳ ಹಿಂದಷ್ಟೆ ಕೇರಳ ಪ್ರವಾಹದ ವೇಳೆ ನಿಸ್ವಾರ್ಥ ಸೇವೆ ಸಲ್ಲಿಸಿ ಜನರ ಮನಗೆದ್ದ ಐಎಎಫ್ ಅಧಿಕಾರಿ ಕಣ್ಣನ್ ಗೋಪಿನಾಥ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬೇರೆಯವರಿಗೆ ಧ್ವನಿಯಾಗಬೇಕು ಎಂಬ ಹಂಬಲದಿಂದ ನಾನು ಈ ಹುದ್ದೆ ಆಯ್ಕೆ ಮಾಡಿಕೊಂಡೆ. ಆದರೆ, ಇದರಲ್ಲಿ ನಾನು ವಿಫಲನಾಗಿದ್ದೇನೆ. ನನಗೆ ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ ಬೇಕು. ಇದೇ ಕಾರಣದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದರು. ಸಸಿಕಾಂತ್ ಸೆಂಥಿಲ್ ರಾಜೀನಾಮೆ ಪತ್ರ ವಿವರ ಇಂತಿದೆ:

ಪ್ರಿಯ ಸ್ನೇಹಿತರೇ,
ನಾನು ಇಂದು ನನ್ನ ಭಾರತೀಯ ಆಡಳಿತಾತ್ಮಕ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳಿವೆಯೇ ಹೊರತು ಯಾವುದೇ ವೈಮನಸ್ಸಿಲ್ಲ. ನನ್ನ ಸದ್ಯದ ಮಂಗಳೂರು ಡಿಸಿ ಪೆÇೀಸ್ಟ್‍ಗೂ ರಾಜೀನಾಮೆಗೂ ಸಂಬಂಧವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮತ್ತು ಅಧಿಕಾರಿಗಳಿಗೆ ನಾನು ಈ ಸಂದರ್ಭದಲ್ಲಿ ಕ್ಷಮೆ ಕೋರಲು ಇಚ್ಚಿಸುತ್ತೇನೆ. ಅವರ ಜತೆ ಕೆಲಸ ಮಾಡಿದ್ದು ಅವಿಸ್ಮರಣೀಯ. ಅರ್ಧದಲ್ಲೇ ರಾಜೀನಾಮೆ ನೀಡಿ ಹೋಗುತ್ತಿರುವುದಕ್ಕೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ.

ದೇಶದ ಸಂವಿಧಾನದ ಮೂಲ ಆಶಯಗಳು ಹಾದಿ ತಪ್ಪುತ್ತಿರುವ ಈ ದಿನಗಳಲ್ಲಿ ನಾನು ಭಾರತೀಯ ಆಡಳಿತಾತ್ಮಕ ಸೇವೆಯಲ್ಲಿ ಮುಂದುವರೆಯುವುದು ನನಗೆ ಸಮಂಜಸವೆನಿ ಸುತ್ತಿಲ್ಲ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ನಮ್ಮ ಪ್ರಜಾಪ್ರಭುತ್ವದ ತಳಹದಿ ಕುಸಿಯು ತ್ತಿರುವಾಗ ನೈತಿಕವಾಗಿ ನನಗೆ ಈ ವೃತ್ತಿಯಲ್ಲಿ ಇರಲು ಇಷ್ಟವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ವಿಷಮಯ ಸ್ಥಿತಿ ಇನ್ನಷ್ಟು ಉಲ್ಬಣವಾಗಲಿದೆ. ನಾನು ಐಎಎಸ್ ವೃತ್ತಿಯ ಆಚೆಗಿದ್ದರೆ ದೇಶದ ಅಭಿವೃದ್ಧಿಗಾಗಿ, ಜನರಿಗಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡ ಬಹುದು. ಎಲ್ಲಾ ಅದರಪಾಡಿಗೆ ಆಗಲಿ ಎಂದು ಸುಮ್ಮನಾಗಲು ಇನ್ನು ಸಾಧ್ಯವಿಲ್ಲ.

ಇನ್ನೊಮ್ಮೆ ನನ್ನ ಜತೆ ಕೆಲಸ ಮಾಡಿದ ಎಲ್ಲರಿಗೂ, ರಾಜ್ಯದ ಜನರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಸಹೋದ್ಯೋಗಿಗಳು ಮತ್ತು ಅವರ ಕುಟುಂಬಸ್ಥರು ಸಂತಸದಿಂದಿರಲಿ ಎಂದು ಆಶಿಸುತ್ತೇನೆ.

Translate »