ಪೊಲೀಸರಿಂದಲ್ಲ, ಕೊರೊನಾ ವೈರಸ್‍ನಿಂದ ಬಚಾವಾಗಿ…
ಮೈಸೂರು

ಪೊಲೀಸರಿಂದಲ್ಲ, ಕೊರೊನಾ ವೈರಸ್‍ನಿಂದ ಬಚಾವಾಗಿ…

April 5, 2020

ಮೈಸೂರು, ಏ. 4(ಆರ್‍ಕೆ)- ನೀವು ಪೊಲೀಸ ರಿಂದ ತಪ್ಪಿಸಿಕೊಳ್ಳಬೇಕಿಲ್ಲ. ಆದರೆ ನಿಮ್ಮ ಜೀವನ ವನ್ನೇ ನಾಶ ಮಾಡುವ ಕೊರೊನಾ ವೈರಸ್ ಸೋಂಕಿನಿಂದ ಪಾರಾಗಿ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು ನಾಗರಿಕರಿಗೆ ಸಲಹೆ ನೀಡಿದ್ದಾರೆ.

ಈ ಕುರಿತು ‘ಮೈಸೂರು ಮಿತ್ರ’ನೊಂದಿಗೆ ಮಾತ ನಾಡಿದ ಅವರು, ಕೋವಿಡ್-19 ಸೋಂಕು ಹರಡ ದಂತೆ ತಡೆಯುವ ಏಕೈಕ ಉದ್ದೇಶದಿಂದ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿರುವಾಗ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡಿ ನಿಯಮ ಉಲ್ಲಂಘಿಸುತ್ತಿರುವುದು ಸರಿಯಲ್ಲ ಎಂದರು.

ನೀವು ಪೊಲೀಸರಿಗೆ ಹೆದರಿ ತಪ್ಪಿಸಿಕೊಂಡು ಪರಾರಿಯಾಗು ವುದು ಬೇಡ, ದಯಮಾಡಿ ನಿಮ್ಮ ಜೊತೆ ಇಡೀ ಸಮುದಾಯ ವನ್ನೇ ಬಲಿ ತೆಗೆದುಕೊಳ್ಳುವ ಮಾರಣಾಂತಿಕ ಕೊರೊನಾ ವೈರಸ್‍ನಿಂದ ಬಚಾವಾಗಿ. ಅನಿವಾರ್ಯ ಸಂದರ್ಭ ಹೊರತುಪಡಿಸಿ, ಉಳಿದಂತೆ ಮನೆಯಲ್ಲೇ ಇದ್ದು, ನೀವು ಬದುಕಿ ಇತರರನ್ನು ಬದುಕಲು ಬಿಡಿ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ನಿಮ್ಮನ್ನು ತಡೆದು ತೊಂದರೆ ಕೊಡುವುದು, ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡುವುದು, ವಾಹನಗಳನ್ನು ಜಪ್ತಿ ಮಾಡುವುದು ನಮ್ಮ ಉದ್ದೇಶವಲ್ಲ. ನೀವು ಸುರಕ್ಷಿತ ವಾಗಿ ಮನೆಯಲ್ಲಿರಿ ಎಂದು ಹೇಳಲು ಪೊಲೀಸ್ ಸಿಬ್ಬಂದಿ ಉರಿಬಿಸಿಲನ್ನೂ ಲೆಕ್ಕಿಸದೇ ಬೀದಿಯಲ್ಲಿ ನಿಂತಿದ್ದಾರೆ. ನಿಮಗೆ ಕೊರೊನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೇ ರಾತ್ರಿಯಿಡೀ ಕಾವಲು ಕಾಯುತ್ತಿದ್ದಾರೆ ಅರ್ಥಮಾಡಿಕೊಳ್ಳಿ ಎಂದೂ ಡಾ.ಚಂದ್ರಗುಪ್ತ ಮನವಿ ಮಾಡಿದ್ದಾರೆ.

ಕೋವಿಡ್-19 ತಡೆ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ
ಮೈಸೂರು, ಏ. 4(ಆರ್‍ಕೆ)- ಕೋವಿಡ್-19 (ಕೊರೊನಾ ವೈರಸ್ ಡಿಸೀಸ್) ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಕರ್ತವ್ಯದಲ್ಲಿ ನಿರತರಾಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದೂ ಸೇರಿದಂತೆ ಯಾವುದೇ ರೀತಿಯ ತೊಂದರೆ ಕೊಟ್ಟಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣ ಕರ್ತವ್ಯದಲ್ಲಿ ನಿರತರಾಗಿದ್ದ ಆಶಾ ಕಾರ್ಯ ಕರ್ತರು, ವೈದ್ಯಕೀಯ ಸಿಬ್ಬಂದಿ ಮೇಲೆ ಕೆಲವೆಡೆ ಹಲ್ಲೆ ಮಾಡಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ನಿರ್ದೇಶನದಂತೆ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ ಪ್ರಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರಿಗೆ ರಕ್ಷಣೆ ನೀಡುವುದೂ ಸಹ ನಮ್ಮ ಜವಾಬ್ದಾರಿ ಎಂದು ಅವರು ತಿಳಿಸಿದರು.

ನಮ್ಮ ಆರೋಗ್ಯ ಇಲಾಖೆ ಅಥವಾ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವ ಪ್ರಸಂಗಗಳೇನೂ ಕಂಡು ಬಂದಿಲ್ಲ. ಆದರೆ, ಕೊರೊನಾ ಹರಡದಂತೆ ನಿಯಂತ್ರಿಸಲು ಐಸೋಲೇಷನ್, ಕ್ವಾರಂಟೈನ್ ಮಾಡುವುದು, ಚಿಕಿತ್ಸೆ ನೀಡಲಿರುವವರ ಮೇಲೆ ಹಲ್ಲೆ ಮಾಡುವುದಾಗಲೀ, ಪೊಲೀಸರೊಂದಿಗೆ ವಾಗ್ವಾದಕ್ಕಿಳಿಯುವುದಾಗಲೀ, ಅಡ್ಡಿ ಪಡಿಸುವುದಾಗಲೀ ಮಾಡಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳ ಲಾಗುವುದು ಎಂದು ಡಾ.ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ. ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗಿರುವವರನ್ನು ಸಂಪರ್ಕಿಸಿದವರೂ ಸ್ವಇಚ್ಛೆ ಯಿಂದ ಮುಂದೆ ಬರುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೂ ಜಮಾತ್‍ಗೆ ಹೋಗಿ ದ್ದವರನ್ನು ಪತ್ತೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈವರೆಗೂ ಹಲ್ಲೆಯಂ ತಹ ಯಾವುದೇ ಘಟನೆ ವರದಿಯಾಗಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Translate »