ಮೈಸೂರು ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ
ಮೈಸೂರು

ಮೈಸೂರು ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ

February 9, 2022

ಮೈಸೂರು, ಫೆ.8(ಎಂಟಿವೈ)- ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ಮಂಗಳವಾರ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಪುಷ್ಪಾರ್ಚನೆ ಮಾಡುವ ಮೂಲಕ ಸವಿತಾ ಮಹರ್ಷಿಗಳ ತತ್ವ ಸಿದ್ದಾಂತವÀನ್ನು ಮೈಗೂಡಿಸಿ ಕೊಂಡು ಜೀವನ ನಡೆಸುವಂತೆ ಸಲಹೆ ನೀಡಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಸವಿತಾ ಮಹರ್ಷಿಗಳ ಜಯಂತಿ ಕಾರ್ಯಕ್ರಮ ಆಯೋಜಿಸಿ ಅವರ ಸಂದೇಶವನ್ನು ಹೆಚ್ಚಿನ ಜನರಿಗೆ ತಲುಪಿಸುವ ಪ್ರಯತ್ನ ಮಾಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಕಮಲಾಬಾಯಿ, ಮುಡಾ ಸದಸ್ಯ ನವೀನ್‍ಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಚನ್ನಪ್ಪ, ಸವಿತಾ ಸಮಾಜದ ಮುಖಂಡರಾದ ಶಿವಕುಮಾರ್, ಮಂಜುನಾಥ್, ನಾಗೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು

Translate »