ವಿದ್ಯಾರ್ಥಿವೇತನವೂ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು,ಜ.19(ಪಿಎಂ)- ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇ ರಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮೈಸೂರು ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಮತ್ತೆ ಪ್ರಾರಂಭವಾಗುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ನೀಡುತ್ತಿದ್ದ ಕೆಲ ವಿದ್ಯಾರ್ಥಿವೇತನ ಸ್ಥಗಿತವಾಗಿದೆ. ಇದರಿಂದ ವಿದ್ಯಾರ್ಥಿ ಗಳಿಗೆ ಸಮಸ್ಯೆ ಆಗುತ್ತಿದೆ. ಸರ್ಕಾರ ಕೂಡಲೇ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಬಿಡು ಗಡೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿ ಸಿದರು. ಅನೇಕ ತಿಂಗಳ ನಂತರ ತರಗತಿ ಗಳು ಪ್ರಾರಂಭವಾಗಿವೆ. ಆದರೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಸೌಲಭ್ಯ ನೀಡಲಾಗಿದೆ. ಉಳಿದ ವಿದ್ಯಾರ್ಥಿ ಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲದೇ ಪರ ದಾಡುವಂತಾಗಿದೆ. ಹೀಗಾಗಿ ಎಲ್ಲಾ ತರ ಗತಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಲವಾರು ಕಾಲೇಜುಗಳಲ್ಲಿ ಅನೇಕ ವಿಷಯಗಳಿಗೆ ಖಾಯಂ ಉಪನ್ಯಾಸಕರೇ ಇಲ್ಲ. ಪ್ರಸ್ತುತ ಕಾಲೇಜುಗಳು ಪ್ರಾರಂಭ ವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಬರು ತ್ತಿದ್ದರೂ ಅನೇಕ ವಿಷಯಗಳಿಗೆ ಉಪ ನ್ಯಾಸಕರು ಇಲ್ಲದೇ ತರಗತಿಗಳೇ ನಡೆಯು ತ್ತಿಲ್ಲ. ಕೂಡಲೇ ಸರ್ಕಾರ ಅತಿಥಿ ಉಪ ನ್ಯಾಸಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕರಾದ ಮಲ್ಲಪ್ಪ, ಚಿರಂತ್ ಸಿಂಧ್ಯ, ಕಿರಣ್, ಸುಹಾಸ್ ಕೃಪಾಲ್ ಮತ್ತಿ ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.