ನವದೆಹಲಿ, ಜೂ.7- ಮಾರ್ಚ್ 16ರಿಂದ ದೇಶಾದ್ಯಂತ ಬಂದ್ ಆಗಿರುವ ಶಾಲೆ ಕಾಲೇಜುಗಳು ಆಗಸ್ಟ್ ಬಳಿಕ ವಷ್ಟೇ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದ ಖಾಸಗಿ ಸಂದರ್ಶನ ದಲ್ಲಿ ಮಾತನಾಡಿರುವ ಅವರು, ಶಾಲೆ ಕಾಲೇಜು ಗಳನ್ನು ಆರಂಭಿಸುವ ಬಗ್ಗೆ ಮಾತನಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಶಿಕ್ಷಕರು ಇತರೆ ಸಿಬ್ಬಂದಿಗಳಿಗೆ ಪ್ರತ್ಯೇಕ ಮೂರು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.
ಲಾಕ್‍ಡೌನ್ ವಿನಾಯತಿ ಬಳಿಕ ದೇಶದಲ್ಲಿ ಶಾಲೆ ಕಾಲೇಜು ಪುನಾ ರಂಭಗೊಳ್ಳುವ ಮಾತುಗಳು ಕೇಳಿ ಬರುತ್ತಿದೆ. ಶಾಲೆ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳುತ್ತಿದ್ದು, ಜುಲೈನಿಂದ ಶಾಲೆ ಕಾಲೇಜುಗಳು ಶೇಕಡಾ 30% ಹಾಜರಾತಿಯೊಂದಿಗೆ ಬೆಳಗ್ಗೆ ಮತ್ತು ಸಂಜೆಯ ಕ್ಲಾಸ್‍ಗಳು ಆರಂಭವಾಗಲಿದೆ. ಅಲ್ಲದೇ ಹಸಿರು ಕಿತ್ತಳೆ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಶುರುವಾಗಲಿದೆ. ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಶಾಲೆ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಸದ್ಯ ಅನುಮತಿ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ. ಆದರೆ ಸಿಬಿಎಸ್‍ಸಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪಿಯುಸಿ ಹಾಗೂ ಡಿಪ್ಲೋಮಾ, ಪದವಿ ಪರೀಕ್ಷೆಗಳು ಬಾಕಿ ಉಳಿದುಕೊಂಡಿದ್ದು ಆಗಸ್ಟ್ ಅಂತ್ಯದ ವೇಳೆಗೆ ಪರೀಕ್ಷೆ ನಡೆಸಿ ಫಲಿತಾಂಶ ನೀಡುವ ಪ್ರಯತ್ನ ಮಾಡಲಿದ್ದೇವೆ. ಆಗಸ್ಟ್ ಬಳಿಕ ಪರಿಸ್ಥಿತಿ ಅನುಸರಿಸಿ ಶಾಲೆ ಕಾಲೇಜುಗಳನ್ನು ಆರಂಭಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.