ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ವಿಜ್ಞಾನ ಹಬ್ಬ
ಮಂಡ್ಯ

ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ವಿಜ್ಞಾನ ಹಬ್ಬ

January 6, 2020

ಕಾರ್ಯಕ್ರಮ ಸಂಬಂಧ ಅಧಿಕಾರಿಗಳೊಂದಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಚರ್ಚೆ
ಶ್ರೀರಂಗಪಟ್ಟಣ, ಜ.5(ವಿನಯ್ ಕಾರೇಕುರ)- ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ-ಕರ್ನಾಟಕ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಮಂಡ್ಯ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಸಹ ಯೋಗದಲ್ಲಿ ಪಟ್ಟಣದ ಸರ್ಕಾರಿ ಜೂನಿ ಯರ್ ಕಾಲೇಜು ಆವರಣದಲ್ಲಿ ಜ.7 ರಿಂದ 10 ರವರೆಗೆ 4 ದಿನಗಳ ಕಾಲ ವಿಜ್ಞಾನ ಹಬ್ಬ ಆಯೋಜಿಸಲಾಗಿದೆ.

ಈ ಸಂಬಂಧ ಶಾಸಕ ರವೀಂದ್ರ ಶ್ರೀ ಕಂಠಯ್ಯ, ಜಿಲ್ಲಾ ಉಪನಿರ್ದೇಶಕ ಆರ್. ರಘುನಂದನ್, ತಹಸೀಲ್ದಾರ್ ಎಂ.ರೂಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮವನ್ನು ವ್ಯವಸ್ಥಿತ ವಾಗಿ ಆಯೋಜಿಸುವ ಕುರಿತು ಚರ್ಚಿಸಿದರು.

ವಿಜ್ಞಾನದ ಹಬ್ಬದಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ 6 ಮತ್ತು 8ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿರುವ 800 ಹೆಚ್ಚು ಯುವ ವಿಜ್ಞಾನಿ ವಿದ್ಯಾರ್ಥಿಗಳು ಭಾಗವ ಹಿಸುತ್ತಿದ್ದು, ತಮ್ಮ ಪ್ರತಿಭೆ ಅನಾವರಣ ಗೊಳಿಸಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು, ಮಾರ್ಗದರ್ಶಕರು ಹಾಗೂ ಸಾವಿ ರಾರು ಜನರು ಹಬ್ಬದಲ್ಲಿ ಭಾಗವಹಿಸಲಿ ದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜು ಆವರಣ ದಲ್ಲಿ ನಡೆಯುತ್ತಿರುವ ಸಿದ್ಧತೆಯನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಪರಿಶೀಲನೆ ನಡೆಸಿದರು.

ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿ ಸುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದ್ದು, ಊಟ-ತಿಂಡಿ ವ್ಯವಸ್ಥೆ ಮಾಡುವ ಬಗ್ಗೆ ಸೂಚಿಸಲಾಗಿದೆ. ಮಕ್ಕಳ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಏಕೆ?, ಹೇಗೆ? ಎಂಬ ”ಪ್ರಶ್ನೆಯೇ ಪ್ರಜ್ಞೆಯಾಗಲಿ!” ಎಂಬ ಧ್ಯೇಯ ವಾಕ್ಯದೊಂದಿಗೆ ಮಕ್ಕಳಲ್ಲಿ ಪ್ರಶ್ನೆ ಮೂಡಿಸುವುದು, ಕಲಿಯುವ ಪ್ರಕ್ರಿಯೆ ಸಂತಸಗೊಳಿಸುವುದು, ಕಲಿಕಾ ಪ್ರಕ್ರಿಯೆ ಯಲ್ಲಿ ಹೆಚ್ಚು ಪಾಲ್ಗೊಳ್ಳುವಂತೆ ಪ್ರೇರೇಪಿ ಸುವುದು, ಹಿಂಜರಿಕೆ ಹೋಗಲಾಡಿಸು ವುದು, ಕೌಶಲಾಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದೇ ವಿಜ್ಞಾನ ಹಬ್ಬದ ಉದ್ದೇಶ.

ಅಲ್ಲದೇ ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸುವುದು, ಮಾನವೀಯ ಮೌಲ್ಯ ಗಳನ್ನು ಹೆಚ್ಚಿಸುವುದು, ಸಮುದಾಯದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು, ಕಲಿ ಯುವ ಕ್ರಿಯೆಯನ್ನು ದ್ವಿಗುಣಗೊಳಿಸುವುದು ವಿಜ್ಞಾನ ಹಬ್ಬದ ಗುರಿಯಾಗಿರುವುದಾಗಿ ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದ್ದಾರೆ.

ಜ.7ರಂದು ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದಿಂದ ವಿದ್ಯಾರ್ಥಿ ವಿಜ್ಞಾನಿಗಳೊಂದಿಗೆ ಸಾರ್ವಜನಿಕರು, ಅಧಿ ಕಾರಿಗಳು ಹಾಗೂ ಜನಪ್ರತಿನಿಧಿಗಳು ವಿವಿಧ ಕಲಾ ತಂಡಗಳೊಂದಿಗೆ ವಿಜ್ಞಾನದ ಅರಿವು ಮೂಡಿಸುವ ಭಿತ್ತಿಪತ್ರಗಳೊಂದಿಗೆ ಕುಂಭ ಮೇಳ ಸಹಿತ ಕಾರ್ಯಕ್ರಮ ನಡೆಯುವ ಜೂನಿಯರ್ ಕಾಲೇಜು ಆವರಣದವ ರೆಗೂ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ವಿಜ್ಞಾನ ಹಬ್ಬವನ್ನು ಅಂದು ಸಂಜೆ 4 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಉಪಸ್ಥಿತಿಯಲ್ಲಿ ಪ್ರಾಥ ಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಉದ್ಘಾಟಿಸುವರು. ಶಾಸಕ ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸುವರು. ಸಂಸದೆ ಸುಮಲತಾ, ಜಿಪಂ ಅಧ್ಯಕ್ಷೆ ನಾಗರತ್ನ, ಎಂಎಲ್‍ಸಿ ಮರಿತಿಬ್ಬೇ ಗೌಡ, ಶಾಸಕರಾದ ಡಿ.ಸಿ.ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಕೆ.ಸಿ.ನಾರಾಯಣಗೌಡ ಸೇರಿ ದಂತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿ ಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ಭಾಗವಹಿ ಸಲಿದ್ದಾರೆ ಎಂದು ತಿಳಿಸಿದರು.

Translate »