ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ
ಹಾಸನ

ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ

November 19, 2018

ಬೇಲೂರು: ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನ ಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಸೋಮೇಗೌಡ ಹೇಳಿದರು.

ಪಟ್ಟಣದ ವಿದ್ಯಾವಿಕಾಸ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾ ಡಿದ ಅವರು, ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳ ಬುದ್ಧಿ ಮಟ್ಟ ವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬೆಳ ವಣಿಗೆ ಹೆಚ್ಚುತ್ತಿದ್ದು ಮಕ್ಕಳು ಹಾಗೂ ಪೋಷಕರು ಇಂತಹ ವಸ್ತು ಪ್ರದರ್ಶನ ಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಲು ಸಹಕಾರಿಯಾಗುತ್ತದೆ ಎಂದರು.

ಇಂದು ತಾವು ವಿಜ್ಞಾನ ಮಾದರಿಯ ವಸ್ತು ಪ್ರದರ್ಶನವನ್ನು ವೀಕ್ಷಿಸಿದಾಗ ಮಕ್ಕಳು ಅತಿ ಉತ್ಸಾಹದಿಂದ ಪಾಲ್ಗೊಂಡಿದ್ದು, ತಾವು ತಯಾರಿಸಿಕೊಂಡು ಬಂದಿರುವ ವಿವಿಧ ಮಾದರಿಯ ವಸ್ತುಗಳ ಬಗ್ಗೆ ವಿವರ ಗಳನ್ನು ನೀಡುತ್ತಿರುವುದನ್ನು ಕಂಡು ಸಂತೋಷವಾಯಿತು. ಶಾಲೆಯಲ್ಲಿ ಓದುವ ಮಕ್ಕಳು ಪುಸ್ತಕದ ಹುಳುವಾಗದೆ ಇತರೆ ವಿಷಯಗಳ ಬಗ್ಗೆ, ಪಠ್ಯೇತರ ಚಟುವಟಿಕೆ ಬಗ್ಗೆಯೂ ಹೆಚ್ಚಿನ ಆಸಕ್ತಿಯನ್ನು ವಹಿಸ ಬೇಕಾಗಿದೆ. ವಸ್ತು ಪ್ರದರ್ಶನದಲ್ಲಿ ಭಾಗ ವಹಿಸುವಾಗ ಮಕ್ಕಳು ಹಿಂಜರಿಕೆಯನ್ನು ಬಿಟ್ಟು ತಮಗೆ ತೋಚಿದ ವಿಷಯಗಳ ಬಗ್ಗೆ ಮಾದರಿಯನ್ನು ಮಾಡಿಕೊಂಡು ಆಸಕ್ತಿ ಯಿಂದ ಭಾಗವಹಿಸಬೇಕು ಎಂದರು.

ಶಾಲಾ ವ್ಯವಸ್ಥಾಪಕ ರಂಗನಾಥ್ ಮಾತ ನಾಡಿ, ಪ್ರತಿ ವರ್ಷದಂತೆ ನಮ್ಮ ಶಾಲೆ ಯಲ್ಲಿ ವಿವಿಧ ವಿಷಯಗಳ ಬಗ್ಗೆ ವಸ್ತು ಪ್ರದರ್ಶನವನ್ನು ಎರ್ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಎಲೆಕ್ಟ್ರಾನಿಕ್ ಉಪಕರಣಗಳ ಬಗ್ಗೆ ಹಾಗೂ ವಿವಿಧ ಮಾದರಿಯ ತಂತ್ರ ಜ್ಞಾನದ ವಸ್ತುಗಳ ಬಗ್ಗೆ ಪ್ರತ್ಯೇಕ ವಿಭಾಗ ವನ್ನು ಆರಂಭಿಸಿ ನುರಿತ ತಂತ್ರಜ್ಞರಿಂದ ತಳಪಾಯದಿಂದಲೇ ಮಕ್ಕಳಿಗೆ ಅರಿವನ್ನು ಮೂಡಿಸಲು ಯೋಜನೆ ರೂಪಿಸ ಲಾಗಿದೆ ಎಂದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಪದ್ಮ ಜಯಕುಮಾರ್, ಪ್ರಾಂಶುಪಾಲೆ ರೂಪಾ ರೆಬೆಲ್ಲೋ, ಶಾಲಿನಿ ವಿಜಯಕೇಶವ್, ಹೆಚ್.ವಿ.ಸ್ವಾಮಿ, ರಘುರಾಮ್, ಚೇತನ್, ವಿವೇಕ್ ಹೆಗ್ಡೆ ಇತರರು ಇದ್ದರು .

Translate »