ವೈಜ್ಞಾನಿಕ, ನ್ಯಾಯಸಮ್ಮತವಾಗಿ ಯಾರಿಗೆ ಸಲ್ಲಬೇಕೋ ಅವರಿಗೆ ಮೀಸಲಾತಿ ಲಭಿಸುತ್ತದೆ
ಮೈಸೂರು

ವೈಜ್ಞಾನಿಕ, ನ್ಯಾಯಸಮ್ಮತವಾಗಿ ಯಾರಿಗೆ ಸಲ್ಲಬೇಕೋ ಅವರಿಗೆ ಮೀಸಲಾತಿ ಲಭಿಸುತ್ತದೆ

February 19, 2021

ಬೆಂಗಳೂರು, ಫೆ.18(ಕೆಎಂಶಿ)-ಮೀಸಲು ಪ್ರಮಾಣ ವನ್ನು ಹೆಚ್ಚಳ ಮಾಡಬೇಕು ಎಂದು ಎಲ್ಲ ಸಮು ದಾಯಗಳು ಕೇಳುವುದು ಸಹಜ. ಪ್ರತಿಯೊಬ್ಬರಿಗೂ ಅವರದ್ದೇ ಆದ ಆಕಾಂಕ್ಷೆಗಳಿರುತ್ತವೆ. ವೈಜ್ಞಾನಿಕವಾಗಿ ಹಾಗೂ ನ್ಯಾಯಸಮ್ಮತವಾಗಿ ಯಾರಿಗೆ ಮೀಸಲು ಸೌಲಭ್ಯ ಸಿಗಬೇಕೋ ಅವರಿಗೆ ನೀಡಲು ಸರಕಾರ ಸಂವಿಧಾನದ ಚೌಕಟ್ಟಿನಲ್ಲಿ ಪ್ರಯತ್ನ ಮಾಡಲಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ಗುರು ವಾರ ನೂತನ ಜಿಮ್ ಹೌಸ್ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ; ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಒಕ್ಕಲಿಗರಿಗೆ ಮೀಸಲು ಹೆಚ್ಚಿಸುವ ಹಾಗೂ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಬೇಡಿಕೆ ಇಟ್ಟಿರುವ ಬಗ್ಗೆ ಗಮನ ಸೆಳೆದಾಗ ಮೇಲಿನಂತೆ ಉತ್ತರಿಸಿದರು.

ನಾನಾ ಸಮುದಾಯಗಳು ಮೀಸಲು ಸೌಲಭ್ಯಕ್ಕಾಗಿ ಹೋರಾಟ ನಡೆಸುತ್ತಿವೆ. ಸರಕಾರದ ಮುಂದೆ ಬೇಡಿಕೆ ಮಂಡಿಸುತ್ತಿವೆ. ಇದೀಗ ಒಕ್ಕಲಿಗರು ಬೇಡಿಕೆ ಇಟ್ಟಿದ್ದಾರೆ. ಎಲ್ಲರ ಬೇಡಿಕೆಗಳನ್ನು ಸರಕಾರ ಪರಿಶೀಲನೆ ಮಾಡಲಿದೆ. ಇತರೆ ಸಮುದಾಯಗಳಲ್ಲಿ ಇರುವಂತೆ ಒಕ್ಕಲಿಗರಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಜನರಿ ದ್ದಾರೆ. ಹೀಗಾಗಿ ಸ್ವಾಮೀಜಿ ಅವರು ಬೇಡಿಕೆ ಇಟ್ಟಿದ್ದಾರೆ. ಕೇಳುವುದರಲ್ಲಿ ತಪ್ಪೇನಿದೆ? ಈ ಎಲ್ಲ ಬೇಡಿಕೆ ಹಾಗೂ ಸಮುದಾಯಗಳ ಸ್ಥಿತಿಗತಿಗಳನ್ನು ಸರಕಾರ ಪರಿಗಣನೆಗೆ ತೆಗೆದುಕೊಳ್ಳಲಿದೆ. ಯಾರಿಗೆ ಅನ್ಯಾಯ ಆಗಿದೆಯೋ ಅವರೆಲ್ಲರಿಗೂ ಮೀಸಲು ಸೌಲಭ್ಯ ಸಿಗಲಿ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು: ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನ ಹಾಗೂ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಡಾ.ಅಶ್ವತ್ಥನಾರಾಯಣ; ಕುಮಾರಸ್ವಾಮಿ ಅವರು ಮೊದಲು ಕನ್ನಡಿ ಮುಂದೆ ನಿಂತು ತಮ್ಮನ್ನು ತಾವು ನೋಡಿಕೊಳ್ಳಲಿ. ಯಾರು ಹೇಗೆ ಎನ್ನುವುದು ಗೊತ್ತಾಗುತ್ತದೆ. ಯಾವ ರೀತಿ ಇವರು  ವ್ಯವಸ್ಥೆಯನ್ನು ನಡೆಸಿಕೊಂಡು ಬಂದಿದ್ದಾರೆ. ಯಾವ ರೀತಿ ಬದುಕಿ ಬಾಳಿದ್ದಾರೆ ಅಂತ ಗೊತ್ತಾಗುತ್ತದೆ. ಅನಗತ್ಯವಾಗಿ ನನ್ನ ಬಗ್ಗೆ ಮಾತಾಡುವುದು ಬೇಡ. ನಾವು ಸಮಾಜದ ಮಧ್ಯೆ ಬೆಳೆದು ಬಂದವರು. ಕಾನೂನಿನ ಅಡಿಯಲ್ಲಿ ನಾವೆಲ್ಲ ಇದ್ದೇವೆ. ನಾವೆಲ್ಲ ಜನತೆಗೆ ಲೆಕ್ಕ ನೀಡಬೇಕು ಎಂಬುದನ್ನು ಮರೆಯ ಬಾರದು ಎಂದು ಟಾಂಗ್ ಕೊಟ್ಟರು. ಇನ್ನು ರಾಮ ಮಂದಿರ ನಿಧಿ ಸಂಗ್ರಹವನ್ನು ಪುಂಡ ಪೋಕರಿಗಳು ಮಾಡುತ್ತಿಲ್ಲ. ಸಂಗ್ರಹವಾಗುತ್ತಿರುವ ಪ್ರತಿ ಪೈಸೆಗೂ ಲೆಕ್ಕವಿದೆ. ಪಾರದರ್ಶಕತೆ ಇದೆ. ಅನಗತ್ಯವಾಗಿ ಜನರನ್ನು ದಿಕ್ಕು ತಪ್ಪಿಸಿ ಗೊಂದಲ ಉಂಟು ಮಾಡು ವುದು ಬೇಡ ಎಂದು ಡಿಸಿಎಂ ಅವರು ಎಚ್‍ಡಿಕೆ ಯನ್ನು ತರಾಟೆಗೆ ತೆಗೆದುಕೊಂಡರು.

ನೂತನ ಪಾರ್ಕಿಂಗ್ ನೀತಿ ಬಗ್ಗೆ ನಿರ್ಧಾರವಿಲ್ಲ: ದುಬಾರಿ ಪಾರ್ಕಿಂಗ್ ಶುಲ್ಕ ವಿಧಿಸಿ ನಗರದಲ್ಲಿ ವಾಹನ ಸಂಚಾರ ಪ್ರಮಾಣವನ್ನು ಕಡಿಮೆ ಮಾಡಿ ಸಾರ್ವ ಜನಿಕ ಸಾರಿಗೆಯನ್ನು ಉತ್ತೇಜಿಸುವ ಪ್ರಸ್ತಾವನೆಯ ಬಗ್ಗೆ ಸರಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು. ತಜ್ಞರ ಸಮಿತಿಯಿಂದ ಈ ಬಗ್ಗೆ ಸಲಹೆಯಷ್ಟೇ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸರಕಾರ ತಾನೇ ನಿರ್ಧಾರ ಕೈಗೊಳ್ಳಬೇಕಲ್ಲವೆ ಎಂದ ಅವರು, ಈ ಬಗ್ಗೆ ಇನ್ನೂ ಯಾವ ರೀತಿಯ ಚರ್ಚೆ ಅಥವಾ ಪರಿಶೀಲನೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯದಾಗುವ, ಸಮಗ್ರವಾಗಿ ಎಲ್ಲ ಅಂಶಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳು ವುದು ಆಗುತ್ತದೆ ಎಂದರು.

ಖಾಲಿ ಹುದ್ದೆ ಭರ್ತಿಗೆ ಕ್ರಮ: ಖಾಲಿ ಇರುವ ಪ್ರಾಂಶು ಪಾಲರು ಹಾಗೂ ಪದವಿ ಕಾಲೇಜು ಬೋಧಕರ ಹುದ್ದೆ ಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಬಜೆಟ್ ಪೂರ್ವ ಸಭೆಯಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗಳಗೆ ಮನವಿ ಸಲ್ಲಿಸ ಲಾಗಿದೆ. ಅವರೂ ಈ ಬಗ್ಗೆ ಪೂರಕವಾಗಿ ಸ್ಪಂದಿಸಿದ್ದಾ ರೆಂದು ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದರು.

 

 

Translate »