ಎಸ್‍ಸಿವಿಟಿ ಪರೀಕ್ಷೆ: ನಿಷೇಧಾಜ್ಞೆ

ಚಾಮರಾಜನಗರ: ಎಸ್‍ಸಿವಿಟಿ ಪರೀಕ್ಷೆ ಸಂಬಂಧ ಮರಿಯಾಲದ ಜೆಎಸ್‍ಎಸ್ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 10 ರಿಂದ 14 ರವರೆಗೆ ಥಿಯರಿ ಪರೀಕ್ಷೆಗಳು ಮತ್ತು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 15 ರಿಂದ 18 ರವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆ ಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ಅಂಗಡಿಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5-30 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ವರ್ಗಕ್ಕೆ ನಿಷೇಧಾಜ್ಞೆ ಆದೇಶ ಅನ್ವಯವಾಗು ವುದಿಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ.