ಪೌರತ್ವ ಮಸೂದೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ
ಮೈಸೂರು

ಪೌರತ್ವ ಮಸೂದೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ

December 14, 2019

ಮೈಸೂರು, ಡಿ.13(ಎಂಕೆ)- ಪೌರತ್ವ (ತಿದ್ದು ಪಡಿ) ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಮತ್ತು ಸಂಸತ್ತಿನ ಉಭಯ ಸದನ ಗಳಲ್ಲಿ ಅಂಗೀಕರಿಸಿರುವುದನ್ನು ವಿರೋ ಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಮೈಸೂರು ನಗರ ಮತ್ತು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಅಶೋಕ ರಸ್ತೆಯಲ್ಲಿರುವ ಮೀಲಾದ್ ಪಾರ್ಕ್ ಎದುರು ಜಮಾಯಿ ಸಿದ ನೂರಾರು ಎಸ್‍ಡಿಪಿಐ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಸಂವಿಧಾನ ಮತ್ತು ದೇಶದ ಮೂಲ ನಿವಾಸಿಗಳ ವಿರುದ್ಧವಾಗಿ ಎನ್‍ಆರ್‍ಸಿ ಜಾರಿಗೆ ಪ್ರಯತ್ನಿಸುತ್ತಿದೆ. ಧರ್ಮಾಧಾರಿತವಾಗಿ ದೇಶವನ್ನು ವಿಭಜಿಸ ಲಾಗುತ್ತಿದೆ ಎಂದು ಕಿಡಿಕಾರಿದರು.

ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಅಬ್ದುಲ್ ಮಜೀದ್ ಮಾತನಾಡಿ, ಎನ್‍ಆರ್‍ಸಿ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಆದರೆ ನಾವು ಒಪ್ಪುವುದಿಲ್ಲ. ಇದರ ವಿರುದ್ಧ ಸಂವಿಧಾನ ಪ್ರೇಮಿಗಳು ದೇಶಾದ್ಯಂತ ಪ್ರತಿಭಟನೆ ಮಾಡು ತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಮಸೂದೆ ಯನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳ ಬೇಕು ಎಂದರು. ಬೇರೆ ದೇಶಗಳಲ್ಲಿ ದೌರ್ಜ ನ್ಯಕ್ಕೆ ಒಳಗಾಗಿರುವವರಿಗೆ ಪೌರತ್ವ ನೀಡು ತ್ತೇವೆ ಎನ್ನುತ್ತಿದ್ದಾರೆ. ಆದರೆ ಅವರು ನಾವು ದೌರ್ಜನ್ಯಕ್ಕೆ ಒಳಗಾಗಿದ್ದೇವೆ ಎಂದು ಹೇಳು ತ್ತಿದ್ದಾರೆಯೇ?. ಯಾವ ಆಧಾರದಲ್ಲಿ ಪೌರತ್ವ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಈ ರೀತಿಯ ಅರ್ಥವಿಲ್ಲದ ಮಸೂದೆಗಳನ್ನು ಜಾರಿಗೆ ತರುತ್ತಿದೆ. ಒಂದು ವೇಳೆ ಕೇಂದ್ರ ಸರ್ಕಾರ ಮಸೂದೆಯನ್ನು ವಾಪಸ್ ಪಡೆಯದೇ ಇದ್ದಲ್ಲಿ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪಕ್ಷದ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ರಾಜ್ಯ ಘಟಕದ ಕಾರ್ಯದರ್ಶಿ ಕುಮಾರಸ್ವಾಮಿ ಮತ್ತಿತ ರರು ಪ್ರತಿಭಟನೆಯಲ್ಲಿದ್ದರು.

Translate »