ದೆಹಲಿ ಗಲಭೆ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ

ಚಾಮರಾಜನಗರ, ಫೆ.27- ದೆಹಲಿ ಗಲಭೆ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಲಾರಿ ನಿಲ್ದಾಣದಲ್ಲಿ ಜಮಾಯಿ ಸಿದ ಎಸ್‍ಡಿಪಿಐ ಕಾರ್ಯಕರ್ತರು, ಜಿಲ್ಲಾ ಧ್ಯಕ್ಷ ಎನ್. ಖಲೀಲ್ ಉಲ್ಲಾ ನೇತೃತ್ವದಲ್ಲಿ ಮೆರವಣಿಗೆ ಹೊರಟು ಡಿವಿಯೇಷನ್ ರಸ್ತೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ದೆಹಲಿ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಖಲೀಲ್‍ಉಲ್ಲಾ ಮಾತನಾಡಿ, ದೆಹಲಿಯಲ್ಲಿ ನಡೆದ ಸಿಎಎ ಪರ ಮತ್ತು ವಿರೋಧದ ಗಲಭೆಯಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಪಾಸ್ತಿಗಳಿಗೆ ನಾಶವಾಗಿದೆ ಎಂದರು.

ಸಿಎಎ ವಿರೋಧಿ ಪ್ರತಿಭಟನಾನಿರತನ್ನು ಎದುರಿಸಲಾಗುವುದು ಎಂದು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಹೇಳಿಕೆ ಬೆನ್ನಲ್ಲೇ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸದಲ್ಲಿದ್ದಾಗಲೇ ಈ ಹಿಂಸಾಚಾರ ನಡೆದಿದೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು. ಕೂಡಲೇ ಗಲಭೆಗೆ ಕಾರಣರಾದವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಉಪಾಧ್ಯಕ್ಷ ಸಮೀವುಲ್ಲಾಖಾನ್, ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಕಾರ್ಯ ದರ್ಶಿ ಜಬೀನೂರ್, ನಗರಸಭಾ ಸದಸ್ಯ ಮೊಹಮ್ಮದ್‍ಅಮೀಖ್, ನಗರಸಭಾ ಮಾಜಿ ಸದಸ್ಯ ಸಿ.ಎಸ್.ಸೈಯದ್‍ಆರೀಫ್ ಜಿಲ್ಲಾ ಸಮಿತಿ ಸದಸ್ಯ ಸೈಯದ್‍ಇರ್ಫಾನ್, ಶಿವಣ್ಣ, ಕಿಜರ್‍ಅಹಮದ್, ಮಹಮ್ಮದ್ ಜಾವಿದ್ ಇತರರು ಭಾಗವಹಿಸಿದ್ದರು.