ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಬಂಧನ
ಕೊಡಗು

ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಬಂಧನ

September 23, 2018

ಸಿದ್ದಾಪುರದಲ್ಲಿ ಎಸ್‍ಡಿಪಿಐ ಪ್ರತಿಭಟನೆ
ಸಿದ್ದಾಪುರ: ಕುಶಾಲನಗರದ ವಾಲ್ಮೀಕಿ ನಿರಾಶ್ರಿತ ಕೇಂದ್ರದಲ್ಲಿ ಇರುವವರ ಪರವಾಗಿ ಸುದ್ದಿಗೋಷ್ಠಿ ನಡೆಸಿ. ಹೋರಾಟ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಸಿದ ಹಿನ್ನಲೆ ರಾಜ್ಯ ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಅವರನ್ನು ಸೋಮ ವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಇವರ ಬಂಧನ ಖಂಡಿಸಿ ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಪಕ್ಷದ ವಿರಾಜಪೇಟೆ ಘಟಕದ ಅಧ್ಯಕ್ಷ ಮುಸ್ತಫ ಮಾತನಾಡಿ, ನಿರಾಶ್ರಿತರ ಪರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಿರ್ವಾಣಪ್ಪ, ನಿರಾಶ್ರಿತರಿಗಾಗಿ ದಿಡ್ಡಳ್ಳಿ ಮಾದರಿಯ ಹೋರಾಟ ಮಾಡುವುದಾಗಿ ಹೇಳಿರುವುದನ್ನು ಅಪರಾಧವಾಗಿ ಬಿಂಬಿಸಿರುವ ಅಧಿಕಾರಿಗಳು ಅವರನ್ನು ಬಂಧಿಸಿ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ಅತ್ಯಂತ ಖಂಡನೀಯ. ನಿರಾಶ್ರಿತರ ಕೇಂದ್ರದಲ್ಲಿ ನಡೆದಿರುವ ಹಲ್ಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು. ಯಾವುದೇ ಕಾರಣಕ್ಕೂ ಅಮಾಯಕರಿಗೆ ಕಿರುಕುಳ ನೀಡಬಾರದು. ಪ್ರವಾಹ ಸಂದರ್ಭದಲ್ಲಿ ನಿರಂತರವಾಗಿ ಕೆಲಸ ನಿರ್ವಹಿಸಿರುವ ಜಿಲ್ಲಾಧಿಕಾರಿಗಳಿಗೆ ಕಳಂಕ ತರಲು ಕೆಲವು ಕಾಣದ ಕೈಗಳು ಒಂದಷ್ಟು ದರ್ಪ ಅಧಿಕಾರಿಗಳ ಮೂಲಕ ಷಡ್ಯಂತರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ನಿರ್ವಾಣ ಪ್ಪರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶೌಕತ್ ಅಲಿ, ಸಂಶೀರ್ ಪ್ರಮುಖರಾದ ಇಬ್ರಾಯಿಂ, ಬಶೀರ್ ಸೇರಿದಂತೆ ಇತರರು ಇದ್ದರು.

Translate »