ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ 7054 ವಿದ್ಯಾರ್ಥಿಗಳು
ಚಾಮರಾಜನಗರ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ 7054 ವಿದ್ಯಾರ್ಥಿಗಳು

February 28, 2019

ಚಾಮರಾಜನಗರ: ನಾಳೆಯಿಂದ (ಶುಕ್ರವಾರ) ಆರಂಭ ವಾಗಲಿರುವ ದ್ವಿತೀಯ ಪಿಯುಸಿ ಪರೀ ಕ್ಷೆಯನ್ನು ಜಿಲ್ಲೆಯಲ್ಲಿ 7054 ವಿದ್ಯಾ ರ್ಥಿಗಳು ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಚಾಮರಾಜನಗರ ತಾಲೂಕಿನಲ್ಲಿ 4, ಯಳಂದೂರು ತಾಲೂ ಕಿನಲ್ಲಿ 2, ಕೊಳ್ಳೇಗಾಲ ತಾಲೂಕಿನಲ್ಲಿ 5, ಹನೂರು ತಾಲೂಕಿನಲ್ಲಿ 2, ಗುಂಡ್ಲು ಪೇಟೆ ತಾಲೂಕಿನಲ್ಲಿ 3 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

3,379 ಬಾಲಕರು, 3,675 ಬಾಲಕಿಯರು ಸೇರಿ ಒಟ್ಟು 7054 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ಇದರಲ್ಲಿ 6003 ವಿದ್ಯಾರ್ಥಿಗಳು ಹೊಸ ಬರು, 815 ವಿದ್ಯಾರ್ಥಿಗಳು ಪುನಾರಾ ವರ್ತಿತರು ಹಾಗೂ ಖಾಸಗಿ ಆಗಿ 236 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿ ದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ವಿ.ಆರ್. ಶ್ಯಾಮಲಾ ‘ಮೈಸೂರು ಮಿತ್ರ’ನಿಗೆ ತಿಳಿಸಿದರು. ಕಲಾ ವಿಭಾಗದಿಂದ 2981 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಿಂದ 2624 ವಿದ್ಯಾರ್ಥಿಗಳು, ವಿಜ್ಞಾನ ವಿಭಾ ಗದಿಂದ 1449 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೂ ಕೆಎಸ್‍ಆರ್‍ಟಿಸಿ ಉಚಿತವಾಗಿ ಬಸ್ ಸೌಲಭ್ಯ ಕಲ್ಪಿಸಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಉಪ ನಿರ್ದೇಶಕರು ಮನವಿ ಮಾಡಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಚಾಮರಾಜನಗರ: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 18ರವರೆಗೆ ನಡೆಯಲಿ ರುವ ದ್ವಿತೀಯ ಪಿಯುಸಿಯ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು, ಚಾಮರಾಜನಗರ ಹಾಗೂ ಹನೂರು ಟೌನ್ ವ್ಯಾಪ್ತಿಯಲ್ಲಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿದೆ. ಪರೀಕ್ಷಾ ಸಂದ ರ್ಭದಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಹಾಗೂ ಶಾಂತಿ ಸುವ್ಯವಸ್ಥೆ ಯಿಂದ ಪರೀಕ್ಷೆ ನಡೆಯಲು ಅನುವಾಗುವಂತೆ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಮುಚ್ಚಲೂ ಸಹ ಆದೇಶಿಸಿದ್ದಾರೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತ ರಾದ ಸಿಬ್ಬಂದಿ ವರ್ಗದವರಿಗೆ ನಿಷೇಧ ಆದೇಶ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Translate »