ಏ.28ರಿಂದ ‘ದ್ವಿತೀಯ PUಅ’ ಪ್ರಾಯೋಗಿಕ ಪರೀಕ್ಷೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ
ಮೈಸೂರು

ಏ.28ರಿಂದ ‘ದ್ವಿತೀಯ PUಅ’ ಪ್ರಾಯೋಗಿಕ ಪರೀಕ್ಷೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ

April 24, 2021

ಬೆಂಗಳೂರು: ಏ.28ರಿಂದ ‘ದ್ವಿತೀಯ ಪಿಯುಸಿ’ ಪ್ರಾಯೋಗಿಕ ಪರೀಕ್ಷೆ ನಡೆಸು ವಂತೆ ಸೂಚಿಸಿ, ಕೆಲವು ಕ್ರಮಗಳನ್ನು ಕೈಗೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏ.28ರಿಂದ ಮೇ 18ರವ ರೆಗೆ ನಡೆಯಬೇಕಿರುವ 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇ ಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ, ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು, ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಗಾರ ರಾಗಿ ರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಯಿಂದ ಕೋವಿಡ್ ರಿಪೆÇೀರ್ಟ್ ಪಡೆಯಬಾರದು, ಕಾಲೇಜಿಗೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು, ಪ್ರತಿದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ಅಂಕಗಳನ್ನು ನಮೂದಿಸಲು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

 

Translate »