ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
ಮೈಸೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

April 22, 2022

ಮೈಸೂರು ಜಿಲ್ಲೆಯಲ್ಲಿ ೫೦ ಕೇಂದ್ರಗಳು, ೩೫,೧೪೧ ವಿದ್ಯಾರ್ಥಿಗಳು ನೋಂದಣ
ಮೈಸೂರು,ಏ.೨೧(ಆರ್‌ಕೆ)-ರಾಜ್ಯ ದಾದ್ಯಂತ ನಾಳೆ (ಏ.೨೨)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗ ಲಿವೆ. ಮೈಸೂರು ನಗರದ ೨೬ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು ೫೦ ಪರೀಕ್ಷಾ ಕೇಂದ್ರ ಗಳನ್ನು ಸ್ಥಾಪಿಸಲಾಗಿದ್ದು, ೩೫,೧೪೧ ಮಂದಿ ಪರೀಕ್ಷೆಗೆ ನೋಂದಣ ಯಾಗಿದ್ದಾರೆ. ಜಿಲ್ಲಾ ದ್ಯಂತ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಲಾ ಗಿದ್ದು, ಕೇಂದ್ರದ ಸುತ್ತ ೨೦೦ ಮೀ. ವ್ಯಾಪ್ತಿ ಯಲ್ಲಿ ಸೆಕ್ಷನ್ ೧೪೪ ರೀತ್ಯಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ಬಂದೋಬಸ್ತ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಕ್ರಮಗಳಿಗೆ ಆಸ್ಪದ ನೀಡದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ವಹಿಸಿದೆ ಎಂದು ಡಿಡಿಪಿಯು ಶ್ರೀನಿ ವಾಸಮೂರ್ತಿ ತಿಳಿಸಿದ್ದಾರೆ. ಪ್ರತೀ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕಾö್ಯನಿಂಗ್ ಮಾಡಿ ಮಾಸ್ಕ್ ಧರಿಸು ವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಚೀಫ್ ಸೂಪರಿಂಟೆA ಡೆಂಟ್‌ಗಳಿಗೆ ನಿರ್ದೇಶನ ನೀಡಲಾಗಿದೆ. ಒಂದು ವೇಳೆ ನೆಗಡಿ, ಜ್ವರದ ಲಕ್ಷಣ ಕಂಡು ಬಂದಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲ ಮಾಡಲಾಗಿದೆ ಎಂದರು. ಇಂದು ತಾವು ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ್ದು, ಎಲ್ಲೆಡೆ ಸಂಪೂರ್ಣ ಸಿದ್ಧತೆ ಮಾಡಲಾಗಿದೆ. ಸ್ಥಳದಲ್ಲಿ ಕುಡಿಯುವ ನೀರು, ಮಾಹಿತಿ ಫಲಕವನ್ನು ಹಾಕಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Translate »