ರಾಜ್ಯ ಸರ್ಕಾರಿ ನೌಕರರಿಗೆ `ಕೇಂದ್ರ’ ಸಮಾನ ವೇತನಕ್ಕೆ ಯತ್ನ

ಮೈಸೂರು, ಆ.೩೦(ಎಸ್‌ಪಿಎನ್)-ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮನಾದ ವೇತನವನ್ನು ರಾಜ್ಯ ಸರ್ಕಾರಿ ನೌಕರರು ಮುಂದಿನ ದಿನಗಳಲ್ಲಿ ಪಡೆಯುವ ನಿಟ್ಟಿ ನಲ್ಲಿ ರಾಜ್ಯ ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.

ಮೈಸೂರು ವಿವಿ ಸೆನೆಟ್ ಭವನದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಸಂಘ ಆಯೋ ಜಿಸಿದ್ದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತ ನಾಡಿ, ಸರ್ಕಾರಿ ನೌಕರರ ಹಲವು ವರ್ಷ ಗಳ ಬೇಡಿಕೆಗಳನ್ನು ರಾಜ್ಯ ಸರ್ಕಾರದ ವಿಶ್ವಾಸ ಗಳಿಸಿ ಈಡೇರಿಸಿ ಕೊಡುವಲ್ಲಿ ಸಂಘ ಯಶಸ್ವಿಯಾಗಿದೆ. ನೌಕರರಿಗೆ ನಗದು ರಹಿತ ಚಿಕಿತ್ಸೆ ಮತ್ತು ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ವನ್ನು ಮಂಜೂರು ಮಾಡಿಸುವಲ್ಲಿ ಸಂಘ ಯಶಸ್ವಿಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ಮಾತ ನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದಾಗ ಅವರು ಮತ್ತಷ್ಟು ಸಾಧನೆ ಮಾಡಲು ಉತ್ತೇಜನ ನೀಡಿದಂತಾ ಗುತ್ತದೆ ಎಂದ ಅವರು, ಜಿಲ್ಲೆಯ ೨,೫೦೦ ನೌಕರರಿಗೆ ರಿಯಾಯಿತಿ ದರದಲ್ಲಿ ನಿವೇ ಶನ ಕೊಡಿಸಲಾಗಿದೆ. ಜಿಲ್ಲಾ ಮಟ್ಟದ ಸಮ್ಮೇ ಳನ, ಕ್ರೀಡಾಕೂಟ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆದಿದೆ ಎಂದರು. ನಿವೃತ್ತ ನೌಕರ ಹೆಚ್.ಕೆ.ರಾಮು ಅವರನ್ನು ಸನ್ಮಾನಿಸಲಾಯಿತು. ಹೆಚ್.ಕೆ.ರಾಮು ಕುರಿತು ಸಂಘದ ನಿರ್ದೇಶಕ ಟಿ.ಸತೀಶ್ ಜವರೇಗೌಡ ಅಭಿನಂದನಾ ನುಡಿಗಳನ್ನಾಡಿ ದರು. ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾತನಾಡಿದರು. ಎಸ್‌ಎಸ್ ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸರ್ಕಾರಿ ನೌಕರರ ಮಕ್ಕಳನ್ನು ಸನ್ಮಾನಿಸಲಾಯಿತು.

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶಗೌಡ ಪಾಟೀಲ್, ಖಜಾಂಚಿ ಆರ್. ಶ್ರೀನಿವಾಸ್, ಜಿಲ್ಲಾ ಸಂಘದ ಗೌರ ವಾಧ್ಯಕ್ಷ ಉದಯ ಕುಮಾರ್, ಉಪಾಧ್ಯಕ್ಷ ಡಿ. ಆನಂದ್, ಕೋಶಾಧ್ಯಕ್ಷ ಸಿ.ಎಸ್. ರಮೇಶ್ ಕುಮಾರ್, ರಾಜ್ಯ ಸಮಿತಿ ಸದಸ್ಯ ಎಂ.ಎಲ್. ವಿಶ್ವ ನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇವಣ್ಣ, ಜಿಲ್ಲಾ ಉಪಾಧ್ಯಕ್ಷರಾದ ವರದ ರಾಜು, ಎ.ಎಲ್. ಉಮೇಶ್, ಮಾಲಂಗಿ ಸುರೇಶ್ ಇನ್ನಿತರರಿದ್ದರು.