ನಾಳೆ ರಾಕೇಶ್ ಸಿದ್ದರಾಮಯ್ಯ ಪುಣ್ಯ ಸ್ಮರಣೆ ಅಂಗವಾಗಿ ವಿಚಾರ ಸಂಕಿರಣ
ಮೈಸೂರು

ನಾಳೆ ರಾಕೇಶ್ ಸಿದ್ದರಾಮಯ್ಯ ಪುಣ್ಯ ಸ್ಮರಣೆ ಅಂಗವಾಗಿ ವಿಚಾರ ಸಂಕಿರಣ

July 29, 2018

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಕೇಶ್ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಂಸ್ಥೆ ಜಂಟಿ ಆಶ್ರಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ ಸಿದ್ದರಾಮಯ್ಯ ಅವರ 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ `ಸಾಮಾಜಿಕ ನ್ಯಾಯದ ಸೋಲು-ಗೆಲುವು’ ಕುರಿತು ಜು.30ರಂದು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ಇದೇ ವೇಳೆ ರಾಜ್ಯ ಹಿಂದುಳಿದ ವರ್ಗಗಳು ಹಾಗೂ ಬುಡಕಟ್ಟು ಮೂಲನಿವಾಸಿಗಳ ಒಕ್ಕೂಟದ ಉದ್ಘಾಟನೆ ನೆರವೇರಲಿದೆ. ಅಂದು ಬೆಳಿಗ್ಗೆ 11ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಾಹಿತಿ ಇಂದೂಧರ್ ಹೊನ್ನಾಪುರ ವಿಚಾರ ಮಂಡನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮೈಸೂರು ವಿವಿ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ವಹಿಸಲಿದ್ದಾರೆ. ಅತಿಥಿಗಳಾಗಿ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಸಾಹಿತಿ ಪ್ರೊ.ಕಾಳೇಗೌಡನಾಗವಾರ, ಶಾಸಕ ಡಾ.ಯತೀಂದ್ರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ವೇದಿಕೆ ಗ್ರಾಮಾಂತರ ಅಧ್ಯಕ್ಷ ಜಾಕೀರ್ ಹುಸೇನ್, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕಾಂಗ್ರೆಸ್ ಮುಖಂಡ ಡೈರಿ ವೆಂಕಟೇಶ್ ಗೋಷ್ಠಿಯಲ್ಲಿದ್ದರು.

Translate »