ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್‍ಕುಮಾರ್‍ಗೆ ಜೀವಾವಧಿ ಶಿಕ್ಷೆ
ಮೈಸೂರು

ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್‍ಕುಮಾರ್‍ಗೆ ಜೀವಾವಧಿ ಶಿಕ್ಷೆ

December 18, 2018

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಪ್ರಮುಖ ಆರೋಪಿ ಮತ್ತು ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿದೆ.

ಅಂತೆಯೇ ಪ್ರಕರಣದ ಶಿಕ್ಷೆ ಪ್ರಮಾಣ ವನ್ನೂ ಕೂಡ ದೆಹಲಿ ಕೋರ್ಟ್ ಇಂದೇ ನೀಡಿದ್ದು, ದೋಷಿ ಸಜ್ಜನ್‍ಕುಮಾರ್‍ಗೆ ಜೀವಾ ವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿ ಸಿದೆ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್‍ಮೆಂಟ್ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ದಂತೆ ನ್ಯಾಯಮೂರ್ತಿ ಎಸ್.ಮುರಳೀಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಅಂತೆಯೇ ಡಿಸೆಂಬರ್ 31ರ ಒಳಗೆ ಸಜ್ಜನ್ ಕುಮಾರ್ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

1947ರಲ್ಲಿ ದೇಶ ವಿಭಜನೆ ವೇಳೆ ನಡೆದಿದ್ದ ಭೀಕರ ಹಿಂಸಾಚಾರ, ಆ ನಂತರ 37 ವರ್ಷಗಳ ಪುನರಾ ವರ್ತನೆಯಾಗಿತ್ತು. ಇಂದಿರಾಗಾಂಧಿ ಹತ್ಯೆಗೆ ಪ್ರತೀಕಾರವಾಗಿ ರಾಜಕೀಯ ಪ್ರೇರಿತ ಹಿಂಸಾಚಾರ ಭುಗಿಲೆದ್ದಿತ್ತು. ಇದು 1947ರ ಹಿಂಸಾಚಾರವನ್ನು ನೆನಪಿಸುವಂತಿತ್ತು ಎಂದು ನ್ಯಾಯಮೂರ್ತಿಗಳು ಹಿಂಸಾಚಾರವನ್ನು ಖಂಡಿಸಿದ್ದಾರೆ. ಅಲ್ಲದೆ ದೋಷಿ ಸಜ್ಜನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೋರ್ಟ್ ಪ್ರಕರಣದ ಅಪರಾಧ ತನ್ನ ರಾಜಕೀಯ ವರ್ಚಸ್ಸು ಬಳಿಸಿಕೊಂಡು ವಿಚಾರಣೆಗೆ ಗೈರಾಗುತ್ತಿದ್ದರು. ಅಲ್ಲದೆ ರಾಜಕೀವಾಗಿ ಹಲವು ಸವಲತ್ತುಗಳನ್ನು ಪಡೆಯುತ್ತಿದ್ದರು ಎಂದು ಕೋರ್ಟ್ ಕಿಡಿಕಾರಿದೆ.

ನಾಳೆ ಕಮಲ್‍ನಾಥ್!: 1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.

ಶಿರೋಮಣಿ ಅಕಾಲಿ ದಳದ ಕೋರಿಕೆ ಮೇರೆಗೆ 2015ರಲ್ಲಿ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ನುಡಿದಿದ್ದಾರೆ. ನ್ಯಾಯದ ಚಕ್ರ ಅಂತಿಮವಾಗಿ ಹೊರಟಿದ್ದು, ಇಂದು ಸಜ್ಜನ್ ಕುಮಾರ್, ನಾಳೆ ಜಗದೀಶ್ ಟೈಟ್ಲರ್, ನಂತರ ಕಮಲ್‍ನಾಥ್, ಗಾಂಧಿ ಕುಟುಂಬವನ್ನು ಸುತ್ತಿಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಕೈವಾಡವಿಲ್ಲ: 984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್‍ಗೆ ಶಿಕ್ಷೆ ವಿಧಿಸಿರುವುದನ್ನು ಕಾಂಗ್ರೆಸ್‍ನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.

ಸಜ್ಜನ್ ಕುಮಾರ್ ದೋಷಿ ಎಂದು ಸಾಬೀತಾಗಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮರಿಂದರ್ ಸಿಂಗ್, ತೀರ್ಪನ್ನು ಸ್ವಾಗತಿಸುತ್ತೇವೆ ಆದರೆ ಇಂದಿರಾ ಗಾಂಧಿ ಹತ್ಯೆಯ ನಂತರ ನಡೆದ ಸಿಖ್ ವಿರೊಧಿ ದಂಗೆಯಲ್ಲಿ ಕಾಂಗ್ರೆಸ್‍ನ ಕೈವಾಡವಿರಲಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

Translate »