ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ ಇನ್ನಿಲ್ಲ
ಮೈಸೂರು

ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ ಇನ್ನಿಲ್ಲ

February 24, 2019

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಸಾಹಿತಿ ಹಾಗೂ ನಿವೃತ್ತ ನ್ಯಾಯಾಧೀಶರಾದ ನಾಡೋಜ ಕೋ. ಚೆನ್ನಬಸಪ್ಪ(98) ಇಂದು ನಿಧನರಾದರು.

ಚೆನ್ನಬಸಪ್ಪ ಅವರು ಐವರು ಮಕ್ಕಳನ್ನು ಅಗಲಿ ದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂ ಕಿನ ಕಾನಾಮಡುಗು ಸಮೀಪದ ಆಲೂ ರಿನಲ್ಲಿ ಹುಟ್ಟಿದ ಚೆನ್ನಬಸಪ್ಪ ವಿದ್ಯಾರ್ಥಿ ಯಾಗಿದ್ದಾಗಲೇ ‘ಭಾರತ ಬಿಟ್ಟು ತೊಲಗಿ’ (ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದರು. ಕಾನೂನು ಪದವಿ ಓದಿದ ಅವರು ಸಾಹಿತ್ಯ ಪ್ರೇಮಿಯಾಗಿದ್ದರು. ಕುವೆಂಪು ಅವರ ಆಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಕೋ ಚೆನ್ನಬಸಪ್ಪ ಅವರು, ‘ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ’ ಸೇರಿದಂತೆ ಹಲವಾರು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.

ವಿಜಯಪುರದಲ್ಲಿ 2015ರಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಮತ್ತು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗೂ ಭಾಜನರಾಗಿದ್ದರು ರಾಷ್ಟ್ರಕವಿ ಆಯ್ಕೆ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Translate »