ಮೈಸೂರು: ಎರಡು ಪ್ರತ್ಯೇಕ ಅಪಘಾತ ಗಳಲ್ಲಿ ಬೈಕ್ ಸವಾರ ಹಾಗೂ ಪಾದಚಾರಿಯೊಬ್ಬ ಮೃತಪಟ್ಟಿದ್ದಾರೆ.
ಬೈಕ್ ಸವಾರ ಸಾವು: ಮರಿದೇವರು ಮತ್ತು ಮಹೇಶ್ ಇಬ್ಬರು ಪ್ರತ್ಯೇಕ ಬೈಕ್‍ಗಳಲ್ಲಿ ಆರ್‍ಟಿ ನಗರದ ಉರು ಕಾತೇಶ್ವರಿ ದೇವಸ್ಥಾನದ ರಿಂಗ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಎಡಕ್ಕೆ ತಿರುವು ಪಡೆದಿದ್ದಾರೆ. ಈ ವೇಳೆ ಬಲಬಾಗದಿಂದ ವೇಗವಾಗಿ ಬಂದ ಲಾರಿ ಮಹೇಶ್ ಓಡಿಸುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಗಾಯಗೊಂಡ ಮಹೇಶ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್.ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾದಚಾರಿ ಸಾವು: ಮತ್ತೊಂದು ಪ್ರಕರಣದಲ್ಲಿ ಮೈಸೂರು-ಬೆಂಗಳೂರು ರಸ್ತೆಯ ಫೌಂಟೇನ್ ವೃತ್ತದ ಬಳಿ ನಡೆದುಕೊಂಡು ಹೋಗುತ್ತಿದ್ದ ಕೆ.ಶಿವಣ್ಣ ಅವರಿಗೆ ಕೆಎಸ್‍ಆರ್‍ಟಿಸಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಎನ್.ಆರ್.ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.